ಚಿಕ್ಕಮಗಳೂರು: ರಾಜ್ಯದ ಇಂದನ ಸಚಿವ ಡಿ.ಕೆ ಶಿವಕುಮಾರ್ ಮತ್ತು ಅವರ ಸಂಬಂಧಿಕರು ಹಾಗೂ ಸ್ನೆಹಿತರ ಮನೆಗಳ ಮೇಲೆ ಐಟಿ ದಾಳಿ ಮಾಡಿಸುವ ಮೂಲಕ ಕೇಂದ್ರಸರ್ಕಾರ ರಾಜಕೀಯ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಗುರುವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡಸಲಾಯಿತು.
ನಗರದ ಆಜಾದ್‌ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪತ್ರಿಭಟನೆ ನಡಸಿದ ಕಾಂಗ್ರೆಸ್ ಪ್ರತಿಭಟನಾಕಾರರು ತಪ್ಪು ಮಾಡದ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಈ ರೀತಿಯ ದಾಳಿಗಳಿಗೆ ಬೆದರುವುದಿಲ್ಲ ಮತ್ತು ಈ ಪ್ರಕರಣವನ್ನು ರಾಜಕೀಯವಾಗಿ ಎದುರಿಸಲಾಗುವುದು ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ಡಿ.ಎಲ್. ವಿಜಯ್ ಮಾತನಾಡಿ, ದೇಶದ ಉನ್ನತ ಸಂಸ್ಥೆಗಳಾದ ಐಟಿ ಮತ್ತು ಇಡಿ ಸಂಸ್ಥೆಗಳನ್ನು ರಾಜಕೀಯ ದ್ವೇಷ ಸಾದಿಸಲು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಜಿಲ್ಲಾ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ ಎಂದರು.
ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ.ಎಲ್. ಮೂರ್ತಿ ಮಾತನಾಡಿ, ನಮ್ಮ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ರಾಜಕಾರಣ ಮಾತ್ರವಲ್ಲದೆ ವ್ಯಾಪಾರ – ವಹಿವಾಟು ನಡೆಸುತ್ತಿದ್ದು ಆದಾಯ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಹೀಗಿರುವಾಗ ಅವರೇಕೆ ತಪ್ಪು ಮಾಡುತ್ತಾರೆ ಎಂದು ಪ್ರಶ್ನಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಕೇಂದ್ರದ ದ್ವೇಷದ ರಾಜಕಾರಣ ಖಂಡಿಸಿದರು.
ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ಕೆ. ಮಹಮದ್, ಪ್ರಧಾನಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ, ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ವಿ. ಶಿವಕುಮಾರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ ಮಾತಾನಾಡಿದರು. ಕೆಪಿಸಿಸಿ ಕಾರ್ಯದರ್ಶಿಗಳಾದ ಕೆ.ಎಂ. ನಾಗರಾಜು, ಸವಿತಾ ರಮೇಶ್, ರಾಜ್ಯ ಕಿಸಾನ್ ಸೆಲ್ ಅಧ್ಯಕ್ಷ ಸಚಿನ್ ಮೀಗಾ, ಜಿಲ್ಲಾ ಉಪಾಧ್ಯಕ್ಷ ಕೆ.ಎಸ್. ಶಾಂತೇಗೌಡ, ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಅಧ್ಯಕ್ಷ ನಿಸಾರ್ ಅಹಮದ್, ಸಿಡಿಎ ಅಧ್ಯಕ್ಷ ಸೈಯ್ಯದ್ ಹನೀಫ್, ವಕೀಲರ ವಿಭಾಗದ ಸೋಮಶೇಕರ್ , ಪದವೀಧರರ ವಿಭಾಗದ ಅಧ್ಯಕ್ಷ ಜಿ.ಬಿ. ಪವನ್, ಮೂಡಿಗೆರೆ ಎಪಿಎಂಸಿ ಅಧ್ಯಕ್ಷ ಎಂ.ಸಿ. ನಾಗೇಶ್, ಸಿಲ್ವಸ್ಟರ್, ರೂಬೆನ್ ಮೋಸಸ್, ಬಿ.ಎಂ. ಸಂದೇಶ್ , ಕಾರ್ತಿಕ್ ಜಿ. ಚೆಟ್ಟಿಯಾರ್ ಮುಂತಾದವರು ನೇತೃತ್ವ ವಹಿಸಿದ್ದರು.