Advertisement

ಡಿಕೆಶಿ ತಪ್ಪೇ ಮಾಡಿಲ್ಲ ಅಂದ್ರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ: CT Ravi

03:02 PM Aug 13, 2023 | Team Udayavani |

ಚಿಕ್ಕಮಗಳೂರು : ಡಿಕೆಶಿಯವರ ಸರ್ಕಾರ ಪ್ರಮಾಣಿಕ ಸರ್ಕಾರ ಅನ್ನೋದಾದ್ರೆ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡ್ಲಿ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದರು.

Advertisement

ಚಿಕ್ಕಮಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಇದು ನಮ್ಮ ಆರೋಪವಲ್ಲ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಆರೋಪ ಎಂದು ಹೇಳಿದ ಅವರು ಡಿಕೆಶಿಗೆ ಅಜ್ಜಯ್ಯನ ಮಠದ ಬಗ್ಗೆ ಇರುವ ಭಕ್ತಿಗೆ ಅಲ್ಲಿಗೆ ಕರೆದಿದ್ದಾರೆ. ಅವರು ತಪ್ಪೇ ಮಾಡಿಲ್ಲ ಅಂದ್ರೆ ಹೋಗಿ ಪ್ರಮಾಣ ಮಾಡಬಹುದಲ್ವಾ ಎಂದು ಪ್ರಶ್ನಿಸಿದರು.

ಗುತ್ತಿಗೆದಾರರ ಬಳಿ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಮೊದಲು 7% ಫಿಕ್ಸ್ ಮಾಡಿದ್ರು. ಹೊಸದಲ್ಲ, ಹಳೆಯದ್ದಕ್ಲೆಲ್ಲಾ ಸೇರಿಸಿ ಮದ್ಯವರ್ತಿಗಳು 10% ಅಂದ್ರು. ಆಮೇಲೆ ಚರ್ಚೆ ಮಾಡಿ 15% ಆದ್ರೆ ಮಾತ್ರ ಕ್ಲಿಯರ್ ಎಂದಿದ್ದಾರೆ ಎಂದು ತಿಳಿಸಿದರು.

ಮುಂದುವರೆದು ಮಾತನಾಡಿ, ಆರೋಪ ಗುತ್ತಿಗೆದಾರರ‌ ಸಂಘದ್ದು. ಈ ಆರೋಪ ಸುಳ್ಳು ಅನ್ನೊದಾದ್ರೆ ಅಜ್ಜಯ್ಯನ ಮಠಕ್ಕೆ ಹೋಗಿ ಸತ್ಯ ಮಾಡ್ಲಿ, ಸತ್ಯ ಮಾಡುವಾಗ ನನ್ನ ಜೀವನದಲ್ಲೇ ಲಂಚ ತೆಗೆದುಕೊಂಡಿಲ್ಲ ಎಂದು ಹೇಳಿದ್ರೆ ಸಾಕ್ಷಿಯೇ ಬೇಕಾಗಿಲ್ಲ ಎಂದು ಹೇಳಿದರು.

ಕಾಂಗ್ರೆಸ್ಸಿನ ಬಹುತೇಕ ಶಾಸಕರು ಒಂದೇ ದಿನ ವಸೂಲಿಗೆ ಹೊರಟಿದ್ದಾರೆ. ನಾವು ಅಷ್ಟು ಖರ್ಚು ಮಾಡಿದ್ದೇವೆ ಅಂತ ಬಹಿರಂಗವಾಗಿ ಹೇಳ್ತಿದ್ದಾರೆ. ದಾನ-ಧರ್ಮಕ್ಕೆ ರಾಜಕಾರಣ ಮಾಡ್ತೀನಾ, ನಾನು ಧರ್ಮರಾಯನಾ..? ಎಂದು ಪ್ರಶ್ನಿಸಿದರು.

Advertisement

ಖರ್ಚು ಮಾಡಿರೋದು ವಸೂಲಿ ಆಗಬೇಕು. ಇಲ್ಲ ಹೆಂಡತಿ ಮಕ್ಕಳನ್ನು ಬೀದಿಗೆ ನಿಲ್ಲಿಸಬೇಕಾ ಎಂದ ಅವರು, ಭ್ರಷ್ಟಾಚಾರ ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಎಂದರು.

ದೇಶ-ರಾಜ್ಯದ ಹಗರಣಗಳನ್ನು ಪಟ್ಟಿ ಮಾಡಿದರೆ, ಶೇ.90 ರಷ್ಟು ಕಾಂಗ್ರೆಸ್ ಅವಧಿಯಲ್ಲಿ ಆಗಿದ್ದು, 90% ಅಪರಾಧಿ ಸ್ಥಾನದಲ್ಲಿ ಇರೋರು ಕಾಂಗ್ರೆಸ್ ಸಚಿವರು, ಆ ಕಾಲದ ಅಧಿಕಾರಿಗಳು ಎಂದ ಅವರು, ಭ್ರಷ್ಟಾಚಾರದ ಬೀಜ ಬಿತ್ತಿದ್ದೆ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.

ಭ್ರಷ್ಟಾಚಾರದಿಂದ ಕಾಂಗ್ರೆಸ್ ವಿಮುಕವಾಗಿದೆ ಅನ್ನೋದನ್ನು ಯಾರು ನಂಬಲ್ಲ. ಭ್ರಷ್ಟಾಚಾರದ ಮತ್ತೊಂದು ಮುಖವೇ ಕಾಂಗ್ರೆಸ್. ಅವರು ಯಾವುದೇ ಪ್ರಾಮಾಣಿಕತೆಯ ಸೋಗು ಹಾಕಿದರೂ, ಭ್ರಷ್ಟಾಚಾರದ ವಾಸನೆ ಇರುತ್ತದೆ.  40%, 15% ಆಗಿದೆ ಅಂದರೆ ಕಡಿಮೆ ಆಯ್ತು ಅಂತ ಒಪ್ಪಿಕೊಂಡಂತೆ ಎಂದು ಸಿಎಂ ಹೇಳಿಕೆ ಗಮನಿಸಿದ್ದೇನೆ. ಅದಲ್ಲ, ನೀವು ಕೇಳುತ್ತಿರುವ 15% ಹಳೆಯದ್ದಕ್ಕೆ, ಹೊಸದು 50% ದಾಟಬಹುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next