Advertisement

ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್‌ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ

01:07 AM Jul 07, 2022 | Team Udayavani |

ಬೆಂಗಳೂರು: ಎಪ್ಪತ್ತೈದನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬೆಂಗಳೂರಿನಲ್ಲಿ 1 ಲಕ್ಷ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರ ಜಾಥಾ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಜ್ಜಾಗುತ್ತಿದ್ದಾರೆ.

Advertisement

ಆ. 3ರಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಹುಟ್ಟುಹಬ್ಬದ ಮೂಲಕ ಶಕ್ತಿ ಪ್ರದರ್ಶನ ಒಂದೆಡೆ ಯಾದರೆ, ಮತ್ತೂಂದೆಡೆ ಆ. 15ರಂದು ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್‌ ಅವರ ಶಕ್ತಿ ಪ್ರದರ್ಶನ ಎಂದೇ ಹೇಳಲಾಗುತ್ತಿದೆ.

ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪಕ್ಷಕ್ಕೆ ಏನೆಲ್ಲ ಕಾರ್ಯಕ್ರಮಗಳು ಅನುಕೂಲವಾಗುತ್ತವೋ ಅದಕ್ಕೆ ಪಕ್ಷದ ಅಧ್ಯಕ್ಷನಾಗಿ ನಾನು ಬೆಂಬಲವಾಗಿ ನಿಲ್ಲುತ್ತೇನೆ ಎಂದರು.

ಸೋನಿಯಾ ಸೂಚನೆ
ಸೋನಿಯಾ ಗಾಂಧಿ ಅವರು ಆ. 15ರಂದು ದೇಶದ 75ನೇ ಸ್ವಾತಂತ್ರೊéàತ್ಸವ ಆಚರಣೆ ವಿಚಾರವಾಗಿ ನನಗೆ ಜವಾಬ್ದಾರಿ ವಹಿಸಿದ್ದು, 1 ಲಕ್ಷ ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರು ಬೆಂಗಳೂರಿನಲ್ಲಿ ಜಾಥಾವನ್ನು ಮಾಡಲಿದ್ದಾರೆ.

ಇದರ ಜತೆಗೆ 75 ಕಿ.ಮೀ ಪಾದಯಾತ್ರೆ ಮಾಡಲು ತಿಳಿಸಿದ್ದು ಇದನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಸಲು ಸೂಚಿಸಲಾಗಿದೆ. ಈ ವಿಚಾರವಾಗಿ ಗುರುವಾರ ಸಭೆ ಕರೆದಿದ್ದೇನೆ. ನಾನು ಪಕ್ಷದ ಹೈಕಮಾಂಡ್‌ ನಿರ್ದೇಶನದಂತೆ ನಡೆದುಕೊಳ್ಳುತ್ತಿದ್ದೇನೆ ಎಂದು ಹೇಳಿದರು.

Advertisement

ಹುಟ್ಟುಹಬ್ಬ ತಪ್ಪಲ್ಲ
ಸಿದ್ದರಾಮಯ್ಯ ಓರ್ವ ನಾಯಕ. ಅವರು 75ನೇ ಹುಟ್ಟಹುಬ್ಬ ಆಚರಿಸಿಕೊಳ್ಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದ ಡಿ.ಕೆ. ಶಿವಕುಮಾರ್‌, ಅದು ಅವರ ವೈಯಕ್ತಿಕ ಹಾಗೂ ಅಭಿಮಾನಿಗಳ ಇಚ್ಛೆಗೆ ಬಿಟ್ಟದ್ದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next