ದೇವನಹಳ್ಳಿ: ಆಪರೇಷನ್ ಕಮಲ ಮಾಡಿ, ಆಡಳಿತದ ಚುಕ್ಕಾಣಿ ಹಿಡಿದರುವ ಬಿಜೆಪಿ ಮೊದಲ ಹಂತವಾಗಿ ಇಡಿಯನ್ನು ದಾಳವಾಗಿ ಮಾಡಿಕೊಂಡು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ರನು ಹಣಿಯಲು ಹೊರಟಿದೆ ಎಂದು ಮಾಜಿ ಶಾಸಕ ಕೆ.ವೆಂಕಟಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಿಂದ ಬೆಂಗಳೂರಿನ ನ್ಯಾಷನಲ್ ಕೇಂದ್ರ ಕಾಲೇಜಿನಿಂದ ರಾಜಭವನ ಚಲೋಗೆ ಹೋಗುವ ಬಸ್ಸುಗಳಿಗೆ ಚಾಲನೆ ನೀಡಿ ಮಾತನಾಡಿದರು.
ಗುಜರಾತಿನ ಶಾಸಕರನ್ನು ರಕ್ಷಣೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಕೇಂದ್ರದ ಗೃಹ ಸಚಿವ ಅಮಿತ್ ಷಾ ಇಡಿ ಮೇಲೆ ಒತ್ತಡ ತಂದು ಪ್ರತಿಕಾರ ತೀರಿಸಿಕೊಳ್ಳುತ್ತಿದ್ದಾರೆ. ಬಿಜೆಪಿಯದ್ದು ಕಾಂಗ್ರೆಸ್ ಒಡೆಯುವ ಕುತಂತ್ರವಾಗಿದೆ. ಈ ಕುತಂತ್ರ ಹೆಚ್ಚು ದಿನ ನಡೆಯುವುದಿಲ್ಲ. ಸರ್ಕಾರದ ದ್ವೇಷದ ರಾಜಕಾರಣದ ವಿರುದ್ಧ ಪಕ್ಷಾತೀತ, ಜಾತ್ಯಾತೀತವಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡುತ್ತೇವೆ. ಕೇಂದ್ರ ಹಾಗೂ ರಾಜ್ಯಗಳೆರಡರಲ್ಲೂ ಬಿಜೆಪಿ ಅಧಿಕಾರದಲ್ಲಿದ್ದು, ಮನಬಂದಂತೆ ವರ್ತಿಸುತ್ತಿದೆ.
ಆದರೆ ಇದರಿಂದ ಕಾಂಗ್ರೆಸ್ ಬಲವರ್ಧನೆಯಾಗುತ್ತದೇ ಹೊರತು ದಮನವಾಗುವುದಿಲ್ಲ ಎಂದು ಕಿಡಿಕಾರಿದರು. ಗ್ರಾಪಂ ಅಧ್ಯಕ್ಷ ಎ.ದೇವರಾಜ್ ಮಾತನಾಡಿ, ಡಿಕೆಶಿ ಒಕ್ಕಲಿಗ ಸಮುದಾಯದ ಪ್ರಬಲ ಮುಖಂಡರು. ಇಡಿಯನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಂಡು, ಒಕ್ಕಲಿಗರನ್ನು ಟಾಗೇìಟ್ ಮಾಡುತ್ತಿದ್ದಾರೆ. ಕೂಡಲೇ ದ್ವೇಷದ ರಾಜಕಾರಣ ಕೈಬಿಡಬೇಕು. ಇಲ್ಲವಾದರೆ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪ್ರಸನ್ನಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ದೇಶದ ಅಭಿವೃದ್ಧಿಗೆ ಗಮನ ಹರಿಸದೇ ವಿನಾಕಾರಣ ಕಾಂಗ್ರೆಸ್ ನಾಯಕರುಗಳನ್ನು ಟಾರ್ಗೆಟ್ ಮಾಡಿ, ಹೊಲಸು ರಾಜಕಾರಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಜಿಪಂ ಸದಸ್ಯರಾದ ಜಿ.ಲಕ್ಷ್ಮೀ ನಾರಾಯಣ್, ಕೆ.ಸಿ. ಮಂಜುನಾಥ್, ರಾಜ್ಯ ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಆರ್. ರವಿಕುಮಾರ್,
ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಜಿ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಪಿ.ಮುನಿರಾಜು, ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಖುದ್ದೂಸ್, ತಾಪಂ ಅಧ್ಯಕ್ಷೆ ಚೆ„ತ್ರಾ, ಸದಸ್ಯ ಮುನೇಗೌಡ, ಮಾಜಿ ತಾಪಂ ಸದಸ್ಯ ಲಕ್ಷ್ಮಣ್‌ಗೌಡ, ತಾಪಂ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್ ಎಸ್‌ಸಿ ವಿಭಾಗದ ಅಧ್ಯಕ್ಷ ಎಂ. ಲೋಕೇಶ್, ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಮಾರುತಿ, ಕೆಪಿಸಿಸಿ ಸದಸ್ಯ ಚೇತನ್ ಗೌಡ,
ಪಟಾಲಪ್ಪ, ಚಿನ್ನಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮುನಿರಾಜು, ಎಪಿಎಂಸಿ ಉಪಾಧ್ಯಕ್ಷ ಸುಧಾಕರ್, ಕಸಬಾ ಹೋಬಳಿ ಗೋಪಾಲಕೃಷ್ಣ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಎಸ್‌ಸಿ ವಿಭಾಗದ ಅಧ್ಯಕ್ಷ ಬೈಚಾಪುರ ರಾಜಣ್ಣ, ಟೌನ್ ಕಾಂಗ್ರೆಸ್ ಅಧ್ಯಕ್ಷ ವೇಣು ಗೋಪಾಲ್, ಪುರಸಭೆ ಸದಸ್ಯರಾದ ಚಂದ್ರಪ್ಪ, ಮಂಜುನಾಥ್, ಮುನಿಕೃಷ್ಣ, ಕುಂದಾಣ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಕೋದಂಡರಾಮ್ ಇದ್ದರು.