Advertisement

ವಿದ್ಯುತ್‌ ಸ್ಥಗಿತಗೊಳಿಸದಿರಲು ಡಿಕೆಶಿ ಸೂಚನೆ

12:09 PM Mar 20, 2018 | Team Udayavani |

ಬೆಂಗಳೂರು: ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗದಂತೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ.

Advertisement

ರಾಜಧಾನಿ ನಗರದಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂಬ ಕಾರಣಕ್ಕೆ ವಿದ್ಯುತ್‌ ಸ್ಥಗಿತಗೊಳಿಸಿ ಬಿಬಿಎಂಪಿ, ಜಲಮಂಡಳಿ ಮತ್ತು ಬಿಎಂಆರ್‌ಸಿಎಲ್‌ ಕಾಮಗಾರಿಗಳಿಗೆ ಅವಕಾಶ ನೀಡದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬೆಸ್ಕಾಂನ 1206 ಫೀಡರ್‌ಗಳಿದ್ದು, ಕೋರಮಂಗಲ, ಎಚ್‌ಎಸ್‌ಆರ್‌ ಲೇಔಟ್‌ ಸೇರಿದಂತೆ 12 ವಿಭಾಗಗಳ 62 ಫೀಡರ್‌ಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ಸಮಸ್ಯೆಯಾಗಿದೆ. ಇದಕ್ಕೆ ಬಿಬಿಎಂಪಿ, ಜಲಮಂಡಳಿ ಮತ್ತು ಬಿಎಂಆರ್‌ಸಿಎಲ್‌ ಕಾಮಗಾರಿಗಳೇ ಕಾರಣ.

ಕೆಲವಡೆ ಕಾಮಗಾರಿಗಳಿಗಾಗಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರೆ, ಇನ್ನು ಕೆಲವೆಡೆ ಕಾಮಗಾರಿಗಳಿಂದ ವಿದ್ಯುತ್‌ ತಂತಿ ತುಂಡಾಗಿತ್ತು. ಹೀಗಾಗಿ ಇನ್ನು ಮುಂದೆ ತುರ್ತು ಸಂದರ್ಭ ಹೊರತುಪಡಿಸಿ ಇತರೆ ಅವಧಿಯಲ್ಲಿ ಕಾಮಗಾರಿಗಳಿಗಾಗಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಬಾರದು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next