Advertisement

ಡಿಕೆಶಿ ಪದಗ್ರಹಣ ಕಾರ್ಯಕ್ರಮ

05:05 AM May 29, 2020 | Lakshmi GovindaRaj |

ಹನೂರು: ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜೂ.7ರಂದು ಅಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿದ್ದು ಕಾಂಗ್ರೆಸ್‌ ಮುಖಂಡರು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರಿಗೆ ಹೊಸ ಹುರುಪು ತುಂಬುವ ಉದ್ದೇಶದಿಂದ ವಿನೂತನ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿಯೂ ಆಯೋಜಿಸಬೇಕು ಎಂದು ಶಾಸಕ ಆರ್‌ .ನರೇಂದ್ರ ಮನವಿ ಮಾಡಿದರು.

Advertisement

ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡರು, ಸಾಮಾಜಿಕ ಜಾಲತಾಣ  ಸಂಯೋಜಕರ ಜತೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಅದೂರಿಯಾಗಿ ಏರ್ಪಡಿಸಬೇಕಿತ್ತು. ಕೊರೊನಾದಿಂದ ಬೆಂಗಳೂರಿನಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸುತ್ತಿದ್ದು, ರಾಜ್ಯದ ಪ್ರತಿಯೊಬ್ಬ  ಕಾರ್ಯಕರ್ತರೂ ಈ ಕಾರ್ಯಕ್ರಮವನ್ನು ವೀಕ್ಷಿಸುವಂತಾಗಬೇಕು ಎಂಬ ದೃಷ್ಟಿಯಿಂದ ಪ್ರತಿ ಗ್ರಾಪಂ ಮಟ್ಟದಲ್ಲಿಯೂ ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈಶ್ವರ್‌, ಜಿಪಂ ಸದಸ್ಯರಾದ ಶಿವಮ್ಮ,  ಬಸವರಾಜು, ತಾಪಂ ಅಧ್ಯಕ್ಷ ರಾಜೇಂದ್ರ, ಜವಾದ್‌ ಅಹಮದ್‌, ಅರುಣ್‌ ಕುಮಾರ್‌, ನಟರಾಜು, ಕೆಂಪಯ್ಯ, ಪಾಳ್ಯಕೃಷ್ಣ, ಉದ್ದನೂರು ಸಿದ್ದರಾಜು, ರಾಮಲಿಂಗಂ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next