Advertisement

ಡಿಕೆಶಿವಕುಮಾರ್ ಅವರೇ, ತಮಿಳುನಾಡಿಗೆ ಪಾದಯಾತ್ರೆ ಮಾಡಿದರೆ ಲಾಭವಾಗಬಹುದು: ಬಿಜೆಪಿ

12:23 PM Mar 22, 2022 | Team Udayavani |

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ‌‌ ಎಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ‌ ನಿರ್ಣಯ ತೆಗೆದುಕೊಂಡಿದೆ. ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಏಕೆ ಮೌನವಾಗಿದ್ದಾರೆ? ತಮಿಳುನಾಡಿಗೆ ಪಾದಯಾತ್ರೆ ಮಾಡುವುದೆಂದು ಎಂದು ಕರ್ನಾಟಕ ಬಿಜೆಪಿ ಪ್ರಶ್ನಿಸಿದೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿಯು, ರಾಹುಲ್ ಗಾಂಧಿ ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರ ಜೊತೆ ಇತ್ತೀಚೆಗೆ ವೇದಿಕೆ ಹಂಚಿಕೊಂಡಿದ್ದರು. ಆದರೆ ಅಧಿಕಾರದ ದಾಹದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಕರ್ನಾಟಕದ ಪರವಾಗಿ ಮಾತನಾಡಲು ಹಿಂಜರಿದರು. ಡಿಕೆಶಿಯವರೇ, ಇಲ್ಲಿ ಪಾದಯಾತ್ರೆ ಮಾಡುವ ಬದಲು ತಮಿಳುನಾಡಿನ ಕಡೆಗೆ ಪಾದ ಬೆಳೆಸಿದ್ದರೆ ಏನಾದರೂ ಲಾಭವಾಗುತ್ತಿತ್ತಲ್ಲವೇ ಎಂದು ಕುಟುಕಿದೆ.

ರಾಜಕೀಯ ಲಾಭಕ್ಕಾಗಿ ಡಿಕೆ ಶಿವಕುಮಾರ್ ಅವರು ಒಂದಲ್ಲ ಎರಡು ಬಾರಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ. ಎರಡು ಬಾರಿ ಸುಳ್ಳಿನ ಜಾತ್ರೆ ಮಾಡಿ ಅಭ್ಯಾಸವಿರುವ ಡಿಕೆಶಿ ಅವರಿಗೆ ಮತ್ತೊಂದು ಬಾರಿ ಪಾದಯಾತ್ರೆ ಮಾಡುವುದು ಕಷ್ಟವೇನಿಲ್ಲ. ಮೂರನೇ ಬಾರಿ, ರಾಜ್ಯದ ಹಿತದೃಷ್ಟಿಯಿಂದ ತಮಿಳುನಾಡು ಕಡೆಗೆ ಪಾದಯಾತ್ರೆ ಮಾಡಿ ಎಂದು ಬಿಜೆಪಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ:ಮೇಕೆದಾಟು ಕುರಿತ ತಮಿಳುನಾಡು ನಿರ್ಣಯಕ್ಕೂ ನಮಗೂ ಸಂಬಂಧವಿಲ್ಲ: ಕುಮಾರಸ್ವಾಮಿ

ಮೇಕೆದಾಟು ಪಾದಯಾತ್ರೆಯ ಮೂಲಕ ಬೆಂಗಳೂರಿನ 15ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಿರುವುದಾಗಿ ಡಿಕೆಶಿ ಹೇಳಿದ್ದಾರೆ. ಅದು ನೀರಿಗಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಎಂಬುದು ಡಿಕೆ ಶಿವಕುಮಾರ್ ಅವರ ಹೇಳಿಕೆಯಲ್ಲೇ ಸ್ಪಷ್ಟವಾಗುತ್ತದೆ. ಹೋಳಿ ಹಬ್ಬ ಮುಗಿದಿದೆ, ಕಾಂಗ್ರೆಸ್ಸಿಗರ ನಿಜ ಬಣ್ಣ ಬಯಲಾಗುತ್ತಿದೆ. ಕುಡಿಯುವ ನೀರಿಗಾಗಿ ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿರುವ ಯೋಜನೆಗೆ‌ ತಮಿಳುನಾಡಿನ ಕಾಂಗ್ರೆಸ್ ಮೈತ್ರಿ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಡಿಕೆಶಿ ಅವರಿಗೆ ತಮಿಳುನಾಡು ಸರ್ಕಾರದ ವಿರುದ್ಧ ಧ್ವನಿ ಎತ್ತುವ ತಾಕತ್ತು ಇದೆಯೇ?  ನೀರಿನ ರಾಜಕಾರಣ ಮಾಡಿ ಸಿಎಂ ಆಗುತ್ತೇನೆ ಎನ್ನುವ ಭ್ರಮೆಯಿಂದ ಹೊರಗೆ ಬನ್ನಿ ಎಂದು ರಾಜ್ಯ ಬಿಜೆಪಿ ಟೀಕೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next