Advertisement
ಮಾಜಿ ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಕಾಂಗ್ರೆಸ್‌ನ ಮಾಜಿ ಶಾಸಕರು ಸುಮಲತಾಗೆ ಆಂತರಿಕವಾಗಿ ಬೆಂಬಲ ವ್ಯಕ್ತಪಡಿಸುವ ಸಾಧ್ಯತೆ ಇರುವುದರಿಂದ ಭಾನುವಾರ ಅವರನ್ನು ಕರೆದು ಮಾತನಾಡಲು ಡಿ.ಕೆ.ಶಿವಕುಮಾರ್‌ಗೆ ಜವಾಬ್ದಾರಿ ನೀಡಲಾಗಿದೆ ಎಂದು ಹೇಳಲಾಗಿದೆ. ಹೀಗಾಗಿ, ಭಾನುವಾರ ಸಂಜೆ ಮಂಡ್ಯ ಕಾಂಗ್ರೆಸ್ ನಾಯಕರ ಸಭೆಯನ್ನು ಶಿವಕುಮಾರ್ ಕರೆದಿದ್ದಾರೆ. ಈಗಾಗಲೇ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಜೆಡಿಎಸ್‌ಗೆ ಕ್ಷೇತ್ರ ಬಿಟ್ಟು ಕೊಡದಂತೆ ಪಕ್ಷದ ವೇದಿಕೆಯಲ್ಲಿ ಮನವಿ ಮಾಡಿಕೊಂಡಿದ್ದು, ಮಂಡ್ಯದಲ್ಲಿ ಕಾಂಗ್ರೆಸ್ ನಿಂದ ಸುಮಲತಾ ಅಂಬರೀಶ್ ಅವರನ್ನೇ ಕಣಕ್ಕಿಳಿಸುವಂತೆ ಒತ್ತಡವನ್ನೂ ಹೇರಿದ್ದಾರೆ.
ಹುಬ್ಬಳ್ಳಿ: “ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸುಮಲತಾ ಇಚ್ಛಿಸಿದ್ದಾರೆ. ಆದರೆ, ಈ ಕ್ಷೇತ್ರವನ್ನು
ಈಗಾಗಲೇ ಜೆಡಿಎಸ್‌ಗೆ ಬಿಟ್ಟು ಕೊಡಲು ನಿರ್ಧರಿಸಲಾಗಿದೆ. ಸುಮಲತಾ ಅವರ ಮನವೊಲಿಸಲು ಪಕ್ಷದಿಂದ ನನಗೆ ಹೇಳಿರಲಿಲ್ಲ. ಆದರೂ ಕೂಡ ಅವರೊಂದಿಗೆ ಚರ್ಚಿಸಿದ್ದೇನೆ. ಅವರು, ಕಾಂಗ್ರೆಸ್ ವಿರುದ್ಧ ವಾಗಿ ಹೋಗುವುದಿಲ್ಲ ಎಂಬ ವಿಶ್ವಾಸವಿದೆ’ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ.ಶಿವಕುಮಾರ ತಿಳಿಸಿದರು.
Related Articles
ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗುತ್ತದೆ. ಈ ವಿಚಾರವಾಗಿ ಸಿಎಲ್‌ಪಿಸಿ ಅಧ್ಯಕ್ಷ ಸಿದ್ದರಾಮಯ್ಯ
ಸ್ಪಷ್ಟನೆ ನೀಡಿದ್ದಾರೆ ಎಂದರು. ಇನ್ನು, “ಸುಮಲತಾ ಕುರಿತು ಸಚಿವ ರೇವಣ್ಣ ಯಾವ ಹೇಳಿಕೆ ಕೊಟ್ಟಿದ್ದಾರೆಂಬ
ವಿಚಾರ ನನಗೆ ಗೊತ್ತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಟಿಕೆಟ್ ಹಂಚಿಕೆ ವಿಚಾರವನ್ನು ಸಿದ್ದರಾಮಯ್ಯ
ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ಅವರನ್ನೇ ಕೇಳಿ’ ಎಂದರು.
Advertisement