Advertisement

ಅರ್ಜಿದಾರರ ಮನೆ ಬಾಗಿಲಿಗೆ DL, RC ಸ್ಮಾರ್ಟ್‌ ಕಾರ್ಡ್‌

11:19 PM Aug 18, 2023 | Team Udayavani |

ಬೆಂಗಳೂರು: ಇನ್ಮುಂದೆ ವಾಹನ ಚಾಲನಾ ಅನುಜ್ಞಾ ಪತ್ರ (ಡಿಎಲ್‌), ವಾಹನ ನೋಂದಣಿ ಪ್ರಮಾಣಪತ್ರ (ಆರ್‌ಸಿ) ಸ್ಮಾರ್ಟ್‌ಕಾರ್ಡ್‌ಗಳು ಅರ್ಜಿದಾರರ ಮನೆಬಾಗಿಲಿಗೇ ಬರಲಿವೆ!

Advertisement

ಈ ಸಂಬಂಧ ಸಾರಿಗೆ ಇಲಾಖೆ ಮತ್ತು ಅಂಚೆ ಇಲಾಖೆ ಪರಸ್ಪರ ಒಡಂಬಡಿಕೆ ಮಾಡಿಕೊಂಡಿದ್ದು, ಇದಕ್ಕೆ ಸರಕಾರ ಶುಕ್ರವಾರ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಅದರಂತೆ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ನಿತ್ಯ ಮುದ್ರಿತವಾಗುವ ಡ್ರೈವಿಂಗ್‌ ಲೈಸೆನ್ಸ್‌ ಮತ್ತು ವಾಹನ ನೋಂದಣಿ ಪ್ರಮಾಣಪತ್ರ ಸ್ಮಾರ್ಟ್‌ಕಾರ್ಡ್‌ಗಳನ್ನು ಸೂಚನಾ ಪತ್ರದೊಂದಿಗೆ ಲಗತ್ತಿಸಿ ಸ್ಪೀಡ್‌ಪೋಸ್ಟ್‌ ಮೂಲಕ ಅರ್ಜಿದಾರರ ಮನೆಬಾಗಿಲಿಗೆ ತಲುಪಿಸಲಾಗುತ್ತದೆ.

ಸಾರಿಗೆ ಇಲಾಖೆ ಕಚೇರಿಯಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಮ್ಮುಖದಲ್ಲಿ ಸಾರಿಗೆ ಮತ್ತು ಅಂಚೆ ಇಲಾಖೆ ಅಧಿಕಾರಿಗಳು ಈ ಸಂಬಂಧದ ಒಡಂಬಡಿಕೆಗೆ ಸಹಿ ಹಾಕಿದರು. ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್‌.ವಿ. ಪ್ರಸಾದ್‌ ಮತ್ತಿತರರಿದ್ದರು. ಸಾರ್ವಜನಿಕರು ಆನ್‌ಲೈನ್‌ ಮೂಲಕ ದಾಖಲಾತಿಗಳ ಮಾಹಿತಿ ವೀಕ್ಷಿಸಬಹುದು ಹಾಗೂ ಸಾರ್ವಜನಿಕರು ಕಚೇರಿಗೆ ಭೇಟಿ ನೀಡದೆ, ಸಂಪರ್ಕರಹಿತ ಮಾದರಿಯಲ್ಲಿ ದಾಖಲಾತಿಗಳನ್ನು ಪಡೆಯಬಹುದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next