Advertisement

DMDK chief Vijayakanth: ತಮಿಳು ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ವಿಧಿವಶ

09:36 AM Dec 28, 2023 | Team Udayavani |

ಚೆನ್ನೈ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್, ಡಿಎಂಡಿಕೆ ನಾಯಕ ವಿಜಯಕಾಂತ್ (71) ಅವರು ಗುರುವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿತ್ತು ಆದರೆ ಇಂದು ಬೆಳಿಗ್ಗೆ ನಿಧನ ಹೊಂದಿರುವುದಾಗಿ ಕುಟುಂಬ ಮೂಲಗಳು ಮಾಹಿತಿ ನೀಡಿವೆ.

ಆಸ್ಪತ್ರೆಯ ಮೂಲಗಳ ಪ್ರಕಾರ ವಿಜಯಕಾಂತ್ ಅವರು ನ್ಯುಮೋನಿಯಾಕ್ಕೆ ತುತ್ತಾಗಿದ್ದರು ಇದರಿಂದ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತಿತ್ತು. ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ಇಂದು (ಗುರುವಾರ) ಬೆಳಿಗ್ಗೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದರು ಎಂದಿದ್ದಾರೆ.

154 ಚಿತ್ರಗಳಲ್ಲಿ ನಟಿಸಿದ್ದ ಸೂಪರ್ ಸ್ಟಾರ್:
ವಿಜಯಕಾಂತ್ ಅವರ ಚಲನಚಿತ್ರ ಪಯಣ ಅದ್ಭುತವಾಗಿತ್ತು ಮತ್ತು ಅವರು ಅನೇಕ ಹಿಟ್ ಚಿತ್ರಗಳನ್ನು ನೀಡಿದ್ದು 154 ಚಿತ್ರಗಳಲ್ಲಿ ನಟಿಸಿದ್ದಾರೆ. ಚಲನಚಿತ್ರಗಳ ನಂತರ ಅವರು ರಾಜಕೀಯಕ್ಕೆ ಸೇರಿದರು, ಅವರು ಡಿಎಂಡಿಕೆ ಸ್ಥಾಪಿಸಿದರು, ಎರಡು ಬಾರಿ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು.

ವಿರೋಧ ಪಕ್ಷದ ನಾಯಕರೂ ಆಗಿದ್ದರು
ಅವರು 2011 ರಿಂದ 2016 ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದಾಗ ಅವರ ರಾಜಕೀಯ ಜೀವನ ಉತ್ತುಂಗದಲ್ಲಿತ್ತು. ಇತ್ತೀಚಿನ ವರ್ಷಗಳಲ್ಲಿ ವಿಜಯಕಾಂತ್ ಅವರ ಆರೋಗ್ಯ ಸ್ಥಿತಿ ಸರಿ ಇರದ ಕಾರಣ ರಾಜಕೀಯದಿಂದ ದೂರ ಉಳಿಯುವಂತೆ ಮಾಡಿತ್ತು.

Advertisement

ಇದನ್ನೂ ಓದಿ: Tragedy: ಭೀಕರ ರಸ್ತೆ ಅಪಘಾತದಲ್ಲಿ ಹೊತ್ತಿ ಉರಿದ ಬಸ್… 13 ಮಂದಿ ಸಜೀವ ದಹನ

Advertisement

Udayavani is now on Telegram. Click here to join our channel and stay updated with the latest news.

Next