Advertisement

DMK; ಮಸೀದಿ ಕೆಡವಿ ಮಂದಿರ ನಿರ್ಮಾಣ ಮಾಡಿರುವುದನ್ನು ಒಪ್ಪುವುದಿಲ್ಲ: ಉದಯನಿಧಿ

05:49 PM Jan 18, 2024 | Team Udayavani |

ಚೆನ್ನೈ: ‘ತಮ್ಮ ಪಕ್ಷವು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವನ್ನು ವಿರೋಧಿಸುವುದಿಲ್ಲ ಆದರೆ ಮಸೀದಿಯನ್ನು ಕೆಡವಿದ ನಂತರ ದೇಗುಲವನ್ನು ನಿರ್ಮಿಸಿರುವುದನ್ನು ವಿರೋಧಿಸುತ್ತದೆ’ ಎಂದು ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಗುರುವಾರ ಹೇಳಿಕೆ ನೀಡಿದ್ದಾರೆ.

Advertisement

ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ”ಕರುಣಾನಿಧಿ ಅವರು ಡಿಎಂಕೆ ನಿರ್ದಿಷ್ಟ ಧರ್ಮ ಅಥವಾ ನಂಬಿಕೆಗೆ ವಿರುದ್ಧವಾಗಿಲ್ಲ ಎಂದು ಹೇಳಿದ್ದರು. ದೇವಸ್ಥಾನ ನಿರ್ಮಾಣ ಮಾಡಿರುವುದರಿಂದ ನಮಗೆ ಸಮಸ್ಯೆ ಇಲ್ಲ. ಮಸೀದಿ ಕೆಡವಿದ ನಂತರ ಮಂದಿರ ನಿರ್ಮಾಣ ಮಾಡಿರುವುದಕ್ಕೆ ನಮ್ಮ ಸಹಮತವಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

“ಆಧ್ಯಾತ್ಮಿಕತೆ ಮತ್ತು ರಾಜಕೀಯವನ್ನು ಬೆರೆಸಬಾರದು ಎಂದು ನಮ್ಮ ಖಜಾಂಚಿ ಟಿ.ಆರ್.ಬಾಲು ಈಗಾಗಲೇ ಹೇಳಿದ್ದಾರೆ” ಎಂದರು.

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿರುವ ಭವ್ಯ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಜನವರಿ 22 ರಂದು ನಡೆಯಲಿದೆ.ಮಂದಿರದ ಪರ ವಿರೋಧದ ಚರ್ಚೆಗಳು ತೀವ್ರವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next