Advertisement

ಅಕ್ರಮ ಗಣಿಗಾರಿಕೆ ಪತ್ತೆಗೆ ಡ್ರೋಣ್‌ ಸರ್ವೆ ಮಾಡಿ

02:53 PM Jan 07, 2023 | Team Udayavani |

ಮಂಡ್ಯ: ಕೆಆರ್‌ಎಸ್‌ ಸುತ್ತಮುತ್ತ ಅಕ್ರಮ ಗಣಿಗಾರಿಕೆ ಪತ್ತೆಗೆ ನಿಖರವಾದ ಡ್ರೋಣ್‌ ಸರ್ವೆ ಮಾಡಿಸಿ, ಮ್ಯಾಪಿಂಗ್‌ ಮಾಡುವಂತೆ ಸಂಸದೆ ಸುಮಲತಾ ಗಣಿ ಮತ್ತು ಭೂ ವಿಜಾnನ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.

Advertisement

ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ, ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಕೇಂದ್ರ ವಲಯ ಮತ್ತು ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೆಆರ್‌ಎಸ್‌ ಸುತ್ತಮುತ್ತಲಿನಲ್ಲೇ ಗಣಿಗಾರಿಕೆ, ಕ್ವಾರಿ ಚಟುವಟಿಕೆಗಳು ಹೆಚ್ಚಾಗಿವೆ. ಇಲ್ಲಿ ಸಕ್ರಮಕ್ಕಿಂತ ಅಕ್ರಮವಾಗಿ ನಡೆಯುತ್ತಿರುವ ಚಟುವಟಿಕೆಗಳು ಹೆಚ್ಚಾಗಿವೆ. ಇದನ್ನು ತಡೆಯಲು ಏಕೆ ಮುಂದಾಗಿಲ್ಲ ಎಂದು ಗಣಿ ಮತ್ತು ಭೂವಿಜಾnನ ಅಧಿಕಾರಿ ಪದ್ಮಜಾ ಅವರನ್ನು ಪ್ರಶ್ನಿಸಿದರು.

ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಇದಕ್ಕೆ ಪ್ರತಿಕ್ರಿಯಿಸಿದ ಪದ್ಮಜಾ, ಅಕ್ರಮ ಗಣಿಗಾರಿಕೆಗೆ ನಾವೆಲ್ಲೂ ಎಡೆಮಾಡಿಕೊಟ್ಟಿಲ್ಲ. ಎಲ್ಲ ಚೆಕ್‌ ಪೋಸ್ಟ್‌ಗಳಲ್ಲೂ ಎರವಲು ಸಿಬ್ಬಂದಿ ನೇಮಕ ಗೊಳಿಸಲಾಗಿದೆ. ಶ್ರೀರಂಗಪಟ್ಟಣ, ಕೆಆರ್‌ಎಸ್‌ ಹಾಗೂ ಮಹದೇವಪುರ ಚೆಕ್‌ಪೋಸ್ಟ್‌ಗಳಲ್ಲಿ ಸಿಸಿ ಕ್ಯಾಮೆರಾ ಸೇರಿದಂತೆ ಆಧುನಿಕ ತಂತ್ರಜಾnನ ಬಳಸಿಕೊಂಡು ಅಕ್ರಮ ಸಾಗಾಣಿಕೆಗೆ ಕಡಿವಾಣ ಹಾಕಲಾಗಿದೆ. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಡುವೆಯೂ ಅಕ್ರಮ ಸಾಗಾಣಿಕೆದಾರರನ್ನು ಪತ್ತೆ ಹಚ್ಚಿ, 21 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರು ಜಾಮೀನು ಪಡೆದುಕೊಂಡಿದ್ದಾರೆ ಎಂದು ವಿವರಿಸಿದರು.

ಟಿಪ್ಪರ್‌ಗಳಿಗೆ ಸ್ಥಳದಲ್ಲೇ ದಂಡ: 10 ಮೆಟ್ರಿಕ್‌ ಟನ್‌ಗಿಂತಲೂ ಹೆಚ್ಚಿನ ಭಾರ ಸಾಗಿಸುವ ಟಿಪ್ಪರ್‌ ಗಳಿಗೆ ಸ್ಥಳದಲ್ಲೇ ದಂಡ ವಿಧಿಸಲಾಗುತ್ತಿದೆ. ಈವರೆಗೆ ಸುಮಾರು 19 ಲಕ್ಷ ರೂ. ದಂಡ ಸಂಗ್ರಹಿಸಲಾಗಿದ್ದು, ಚಾಲ್ತಿ ಕಲ್ಲುಗಣಿ ಗುತ್ತಿಗೆದಾರರಿಂದ 23 ಕೋಟಿ ರೂ. ಹಾಗೂ ಅವಧಿ ಮುಗಿದ ಕಲ್ಲುಗಣಿ ಗುತ್ತಿಗೆದಾರರಿಂದ 39.85 ಕೋಟಿ ರೂ. ಸೇರಿ ಒಟ್ಟು 63.83 ಕೋಟಿ ರೂ. ರಾಜಧನ ಬಾಕಿ ಇದ್ದು, ಇದನ್ನು ವಸೂಲಿ ಮಾಡಲು ಈಗಾಗಲೇ ನೋಟೀಸ್‌ ಜಾರಿಗೊಳಿಸಲಾಗಿದೆ ಎಂದರು.

ಸುಮ್ಮನೆ ಕೂತರೆ ಪ್ರಯೋಜನವಿಲ್ಲ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯ ಪುರ, ನೊಟೀಸ್‌ ನೀಡಿ ಸುಮ್ಮನೆ ಕೂತರೆ ಪ್ರಯೋಜನವಿಲ್ಲ. ನ್ಯಾಯಾಲಯದಲ್ಲಿ ನೀವು ಹಾಕಿರುವ ಪ್ರಕರಣಗಳ ವಿಚಾರಣೆಗೆ ವಕೀಲರೇ ಹಾಜರಾಗುತ್ತಿಲ್ಲ ಎಂಬ ದೂರುಗಳಿವೆ. ಈ ಹಿನ್ನೆಲೆಯಲ್ಲಿ ಅವರ ಪರವಾನಗಿ ರದ್ದುಗೊಳಿಸಿ, ಸಂಬಂಧಪಟ್ಟ ತಹಶೀಲ್ದಾರರಿಗೆ ಇವರ ಸ್ಥಿರ ಮತ್ತು ಚರಾಸ್ತಿ ಮಾಹಿತಿ ಸಂಗ್ರಹಿಸಿ ಮುಟ್ಟು ಗೋಲು ಹಾಕಿಕೊಳ್ಳುವ ಮೂಲಕ ರಾಜಧನ ವಸೂಲಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Advertisement

39.11 ಲಕ್ಷ ದಂಡ ಸಂಗ್ರಹ: ಪ್ರಸಕ್ತ ಸಾಲಿನಲ್ಲಿ ಜಿಲ್ಲಾದ್ಯಂತ ಖನಿಜಗಳ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಸಂಬಂಧ 66 ಪ್ರಕರಣಗಳನ್ನು ಪತ್ತೆ ಮಾಡಿ ವಿವಿಧ ನ್ಯಾಯಾಲಯದಲ್ಲಿ ನಿಯಮಾನುಸಾರ ಖಾಸಗಿ ಪ್ರಕರಣ ದಾಖಲಿಸಲಾಗಿದೆ. ಅನಧಿಕೃತ ಖನಿಜ ಸಾಗಾಣಿಕೆ ಮಾಡುತ್ತಿದ್ದ 119 ಪ್ರಕರಣಗಳಲ್ಲಿ 3 ಪ್ರಕರಣಗಳಿಗೆ ಪಿಸಿಆರ್‌ ದಾಖಲಿಸಿದ್ದು, ಉಳಿದ 116 ಪ್ರಕರಣಗಳಿಂದ 39.11 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಪದ್ಮಜಾ ಮಾಹಿತಿ ನೀಡಿದರು.

ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳೀಗೌಡ, ಡೀಸಿ ಡಾ.ಎಚ್‌.ಎನ್‌. ಗೋಪಾಲಕೃಷ್ಣ, ಜಿಪಂ ಸಿಇಒ ಶಾಂತಾ ಎಲ್‌. ಹುಲ್ಮನಿ, ಜಿಲ್ಲಾ ಪೊಲೀಸ್‌ ಅಧೀಕ್ಷಕ ಎನ್‌ .ಯತೀಶ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next