ತೆಲಂಗಾಣ: ತೆಲಂಗಾಣ ಓಲ್ಡ್ ಸಿಟಿ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸುವುದಾಗಿ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ಒಂದು ವೇಳೆ ನಿಮಗೆ ಧೈರ್ಯವಿದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿ ಎಂದು ಸವಾಲು ಹಾಕಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Madhya Pradesh: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನಾಲ್ವರು ಸಜೀವ ದಹನ
ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಬಂಡಿ ಸಂಜಯ್, ತೆಲಂಗಾಣದಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ಮತ್ತು ಎಐಎಂಐಎಂ ಮುಖ್ಯಸ್ಥ ಒವೈಸಿ, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯಲ್ಲಿ ರೋಹಿಂಗ್ಯಾ, ಪಾಕಿಸ್ತಾನಿ ಮತ್ತು ಅಫ್ಘಾನಿಸ್ತಾನ್ ಮತದಾರರ ನೆರವಿನೊಂದಿಗೆ ಜಯ ಗಳಿಸಲು ಪ್ರಯತ್ನಿಸುತ್ತಿರುವುದಾಗಿ ಆರೋಪಿಸಿದ್ದರು.
ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯನ್ನು ಪಾಕ್, ಅಫ್ಘಾನಿಸ್ತಾನ್ ಹಾಗೂ ರೋಹಿಂಗ್ಯಾ ಮತದಾರರನ್ನು ಹೊರತುಪಡಿಸಿ ನಡೆಸಬೇಕಾಗಿದೆ. ನಾವು(ಬಿಜೆಪಿ) ಈ ಚುನಾವಣೆಯಲ್ಲಿ ಜಯಗಳಿಸಿದ ನಂತರ ತೆಲಂಗಾಣ ಓಲ್ಡ್ ಸಿಟಿ ಮೇಲೆ ಸರ್ಜಿಕಲ್ ದಾಳಿ ನಡೆಸುವುದಾಗಿ ಬಂಡಿ ಎಚ್ಚರಿಕೆ ನೀಡಿರುವುದಾಗಿ ವರದಿಯಾಗಿತ್ತು.
ಬಂಡಿ ಸಂಜಯ್ ಸಿಂಗ್ ಓಲ್ಡ್ ಸಿಟಿ ಮೇಲೆ ಸರ್ಜಿಕಲ್ ದಾಳಿ ನಡೆಸುವುದಾಗಿ ಹೇಳಿದ್ದಾರೆ. ಆದರೆ ನಿಮಗೆ ಧೈರ್ಯವಿದ್ದರೆ ಚೀನಾದ ಮೇಲೆ ಸರ್ಜಿಕಲ್ ದಾಳಿ ನಡೆಸಿ ಎಂದು ಅಸಾದುದ್ದೀನ್ ಒವೈಸಿ ತಿರುಗೇಟು ನೀಡಿರುವುದಾಗಿ ವರದಿ ತಿಳಿಸಿದೆ.