Advertisement

ಕೋವಿಡ್‌ ನಿಯಮಗಳ ಪಾಲನೆ ಮಾಡಿ

12:49 PM Mar 30, 2021 | Team Udayavani |

ಗದಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಅಧಿಕವಾಗುತ್ತಿದೆ. ಜಿಲ್ಲೆಯ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳ ಪಾಲನೆ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Advertisement

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೋವಿಡ್‌ ನಿಯಂತ್ರಣ ಕುರಿತು ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅನುಸರಿಸಬೇಕಾದ ಕ್ರಮಗಳಕುರಿತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಭ್ಯಸಿಸುವಮಕ್ಕಳಿಗೆ ಕೋವಿಡ್‌ ಸೋಂಕು ತಗಲುವ ಸಾಧ್ಯತೆಗಳಿದ್ದು,ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳ ಪಾಲನೆಯನ್ನು ಶಾಲಾ ಮುಖ್ಯಸ್ಥರು ಹಾಗೂ ವಸತಿ ನಿಲಯಗಳ ಮುಖ್ಯಸ್ಥರು ಸರಿಯಾಗಿ ಪಾಲಿಸಬೇಕೆಂದು ಇಲಾಖೆಯ ಮುಖ್ಯಸ್ಥರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಕಾಲಕಾಲಕ್ಕೆ ಜಿಲ್ಲಾಡಳಿತಕ್ಕೆ ಮಾಹಿತಿ ಒದಗಿಸುವಂತೆ ತಿಳಿಸಿದರು.

ರೋಣ ತಾಲೂಕಿನ ಒಂದೇ ವಸತಿ ನಿಲಯದಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ವಸತಿ ನಿಲಯದ ಶಂಕಿತರನ್ನು ಪರೀಕ್ಷೆಗೆಒಳಪಡಿಸಲಾಗುತ್ತಿದೆ. ಸೋಂಕು ದೃಢಪಟ್ಟ ಮಕ್ಕಳನ್ನುತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇನ್ನುಳಿದವಸತಿ ನಿಲಯದ ಮಕ್ಕಳನ್ನು ಹತ್ತಿರದ ವಸತಿ ನಿಲಯಕ್ಕೆಸ್ಥಳಾಂತರಿಸಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿಕೋವಿಡ್‌ ಪ್ರಕರಣಗಳು ಅಧಿ ಕವಾದಲ್ಲಿ ಮುಂಜಾಗ್ರತಾಕ್ರಮವಾಗಿ ಚಿಕಿತ್ಸೆ ನೀಡಲು ತಾಲೂಕಿಗೊಂದು ವಸತಿನಿಲಯವನ್ನು ಗುರುತಿಸಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಭ್ಯಸಿಸುವ ಮಕ್ಕಳಿಗೆ ಸೋಂಕು ನಿಯಂತ್ರಣ ಕ್ರಮಗಳ ಕುರಿತು ಕಾಲಕಾಲಕ್ಕೆ ನಿರ್ದೇಶನ ನೀಡಬೇಕು. ಮಕ್ಕಳು ವಿನಾಕಾರಣ ಗುಂಪುಗೂಡುವುದನ್ನು ತಪ್ಪಿಸಬೇಕು. ನಿರಂತರ ಮಾಸ್ಕ್ ಧರಿಸಬೇಕು. ಅಲ್ಲದೇ ಆಗಾಗ್ಗೆ ಸೋಪಿನಿಂದಕೈಕಾಲುಗಳನ್ನು ತೊಳೆದುಕೊಳ್ಳುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

Advertisement

ಮಕ್ಕಳಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದ ತಕ್ಷಣ ಆರೋಗ್ಯ ಇಲಾಖೆಯ ತಪಾಸಣಾ ತಂಡವುಕಾರ್ಯಪ್ರವೃತ್ತರಾಗಿ ಶೀರ್ಘ‌ವೇ ಕೋವಿಡ್‌ ತಪಾಸಣೆಗೆ ಒಳಪಡಿಸುವ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ಮುಂದಾಗುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|ಜಗದೀಶ ನುಚ್ಚಿನ್‌ ಅವರಿಗೆ ಸೂಚಿಸಿದರು.

ಶಿಕ್ಷಣ ಇಲಾಖೆಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಬಿ.ಆರ್‌.ಸಿ ಹಾಗೂ ಸಿಆರ್‌ಸಿ ಅಧಿಕಾರಿಗಳಿಗೆಶಾಲಾ ಮಟ್ಟದಲ್ಲಿ ಎಸ್‌ಒಪಿ ಪಾಲನೆ ಕುರಿತು ತೆಗೆದುಕೊಂಡಿರುವ ಕ್ರಮಗಳ ಕುರಿತು ಪ್ರತಿ ದಿನವರದಿಯನ್ನು ಉಪನಿರ್ದೇಶಕರು ತರಿಸಿಕೊಳ್ಳುವಂತೆ ಸೂಚಿಸಿದರು. ಒಟ್ಟಾರೆ ಕೋವಿಡ್‌ ಸೋಂಕಿನಿಂದ ಆಗುವಜೀವಹಾನಿ ತಪ್ಪಿಸಲು ಅಗತ್ಯದ ಎಲ್ಲ ಮುಂಜಾಗ್ರತಾಕ್ರಮ ವಹಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ನಿಯಂತ್ರಣಕ್ಕೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸತೀಶಕುಮಾರ್‌ ಎಂ, ಮಾತನಾಡಿ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಇಲಾಖೆಗಳ ಜಿಲ್ಲಾ ಮುಖ್ಯಸ್ಥರು ಸಮನ್ವಯ ದೊಂದಿಗೆಕಾರ್ಯನಿರ್ವಹಿಸುವ ಮೂಲಕ ಮಕ್ಕಳಲ್ಲಿಕೋವಿಡ್‌ ಸೋಂಕಿನ ಕುರಿತು ಜಾಗೃತಿ ಮೂಡಿಸಿಸೋಂಕಿನಿಂದ ಆಗುವ ಜೀವಹಾನಿ ತಪ್ಪಿಸಲು ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ರವಿ ಗುಂಜೀಕರ್‌,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಹೊಸಮನಿ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಪ್ಪ, ಶಿಕ್ಷಣ ಇಲಾಖೆ ಗಣೇಶ ಬಾರಾಟಕ್ಕೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next