ಬಂದಿಲ್ಲ ಎಂದು ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.
Advertisement
ನೆರೆಯ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು,ಅಲ್ಲಿಯೂ ಸಹಇಂತಹ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದ್ದರಿಂದ ಇದು ಸುಳ್ಳು ಸುದ್ದಿ ಹರಡಿಸಲಾಗುತ್ತಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
Related Articles
Advertisement
ಜಾಗೃತಿ: ಜಿಲ್ಲೆಯಲ್ಲಿ ಮಕ್ಕಳ ಕಳ್ಳತನ ಮಾಡುವ ತಂಡ ಬಂದಿದೆ ಎಂಬ ಸುದ್ದಿ ಹರಡಿ ಸಾರ್ವಜನಿಕರು ಭಯಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಆಟೋ ಮೂಲಕ ಜಾಗೃತಿ ಮೂಡಿಸಲಾಯಿತು. ಜಿಲ್ಲೆಯಲ್ಲಿ ಯಾವುದೇ ಮಕ್ಕಳ ಕಳ್ಳತನ ಮಾಡುವ ತಂಡ ಬಂದಿಲ್ಲ. ಗಾಳಿ ಸುದ್ದಿಗೆ ಜನರು ಕಿವಿಗೂಡಬಾರದು. ಇನ್ನೂ ಕೂಲಿ ಕೆಲಸಕ್ಕಾಗಿ ಬಂದ ಅಪರಿಚಿತ ವ್ಯಕ್ತಿಗಳನ್ನು ಹಿಡಿದು ಅವರ ಮೇಲೆ ಹಲ್ಲೆ ನಡೆಸುವ ಮೂಲಕ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಇಂತಹ ಘಟನೆ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.
ನಗರದ ಹಳೆ ಬಸ್ ನಿಲ್ದಾಣ, ಸುಭಾಷ ವೃತ್ತ, ಶಾಸ್ತ್ರಿ ವೃತ್ತ, ಹೊಸ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಗಾಂಧಿ ವೃತ್ತ ಸೇರಿದಂತೆ ಯರಗೋಳ, ರಾಮಸಮುದ್ರ, ವಡಗೇರಾ ಇನ್ನಿತರ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಸಿಪಿಐ ಮೌನೇಶ ಪಾಟೀಲ, ಪಿಐ ಜಯಶ್ರೀ, ಗ್ರಾಮೀಣ ಠಾಣೆ ಪಿಐ ಅಲೀಂ, ವಡಗೇರಾ ಪಿಎಸ್ಐ ಮಹಾದೇವ, ರವಿ ರಾಠೊಡ ಸೇರಿದಂತೆ ಇತರರು ಇದ್ದರು.