Advertisement
ಪ್ರಸನ್ನಹಳ್ಳಿ ರಸ್ತೆಯ ಆಕಾಶ್ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಎಚ್1 ಎನ್1 ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದಕ್ಕೆ ಪ್ರತಿ ಮನೆ ಅಕ್ಕ ಪಕ್ಕ ಸ್ವತ್ಛತೆಗೆ ಆದ್ಯತೆ ನೀಡಬೇಕು. ಸ್ವತ್ಛತೆ ಇಲ್ಲದಿದ್ದರೆ ಸಾಂಕ್ರಾಮಿಕ ರೋಗಗಳು ಬರಲಿವೆ. ಅದಕ್ಕಾಗಿ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕೆಂದು ಹೇಳಿದರು.
Related Articles
Advertisement
ಈ ವೇಳೆ ಜಿಲ್ಲಾ ಮಲೇರಿಯಾ ರೋಗ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ರೇವಣ್ಣ, ಆಕಾಶ್ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ.ವೀರಣ್ಣ ಇದ್ದರು.
ಸಾಮಾನ್ಯ ವೈರಸ್ ಜ್ವರ ಎಚ್1 ಎನ್1 ಬಗ್ಗೆ ಭಯ ಬೇಡ. ಸಾಮಾನ್ಯ ವೈರಸ್ ಜ್ವರವಾಗಿದ್ದು ನಿರ್ದಿಷ್ಟ ಮತ್ತು ಸೂಕ್ತ ಚಿಕಿತ್ಸೆಯಿಂದ ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗ ಬಹುದು. ತೀವ್ರ ಜ್ವರ, ಅತಿಯಾದ ಭೇದಿ, ವಾಂತಿ , ಅತಿಯಾದ ಮೈ ಕೈ ನೋವು, ಕೆಮ್ಮು, ಹಳದಿ ಕಫ, ನೆಗಡಿ, ಗಂಟಲು ಕೆರೆತ, ಉಸಿರಾಟದ ತೊಂದರೆ ಲಕ್ಷಣ. ಈ ಲಕ್ಷಣ ಕಂಡುಬಂದಲ್ಲಿ ಸರ್ಕಾರಿ ಆಸ್ಪತ್ರೆ ಯಲ್ಲಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಕೆಮ್ಮುವಾಗ, ಸೀನುವಾಗ ಬಾಯಿ ಹಾಗೂ ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳ ಬೇಕು. ಮೂಗು, ಕಣ್ಣು,ಬಾಯಿ ಮುಟ್ಟಿ ಕೊಳ್ಳುವ ಮೊದಲು , ನಂತರ ಕೈಗಳನ್ನು ಸಾಬೂನಿನೊಂದಿಗೆ, ನೀರಿನೊಂದಿಗೆ ಚೆನ್ನಾಗಿ ತೊಳೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆರೋಗ್ಯಾಧಿಕಾರಿ ಯೋಗೇಶ್‌ಗೌಡ ಮಾಹಿತಿ ನೀಡಿದರು.