Advertisement

ಭಯ ಬೇಡ, ಎಚ್ಚರವಿರಲಿ

02:05 PM May 15, 2020 | Suhan S |

ಗದಗ: ಕೋವಿಡ್  ರೋಗದ ಬಗ್ಗೆ ಆತಂಕಗೊಳ್ಳದೇ, ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಸತೀಶ ಬಸರೀಗಿಡದ ಹೇಳಿದ್ದಾರೆ.

Advertisement

ಸಾರ್ವಜನಿಕರು ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತಿ ಮುಖ್ಯವಾಗಿದೆ. ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿಯುವ ಮೂಲಕ ಮತ್ತು ಕೈಯನ್ನು ಆಗಾಗ ತೊಳೆದುಕೊಳ್ಳಬೇಕು. ಸರಳ ನೈರ್ಮಲ್ಯವನ್ನು ಅಭ್ಯಾಸ ಮಾಡಿಕೊಳ್ಳಬೇಕು. ಪ್ರಾಣಿಗಳ ನೇರ ಸಂಪರ್ಕ ಹಾಗೂ ಬೇಯಿಸದ, ಕಚ್ಚಾ ಮಾಂಸ ಸೇವನೆಯನ್ನು ಮಾಡಬಾರದು. ಸೋಂಕು ಪೀಡಿತರ ಸಂಪರ್ಕದಿಂದ ದೂರವಿರಬೇಕು. ಶಂಕಿತ ರೋಗಿಯ ಮನೆಯಲ್ಲೇ ಪ್ರತ್ಯೇಕವಾಗಿರುವುದು ಮತ್ತು ಟ್ರಿಪಲ್‌ ಲೇಯರ್‌ ಮಾಸ್ಕ್ ಬಳಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು. ಉಸಿರಾಟದ ತೊಂದರೆಯಾದರೆ ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ಅಸುರಕ್ಷಿತವಲ್ಲದ ಕಾಡುಪ್ರಾಣಿ ಅಥವಾ ಸಾಕು ಪ್ರಾಣಿಗಳನ್ನು ಮುಟ್ಟಬಾರದು. ಹೆಚ್ಚಿನ ಮಾಹಿತಿಗಾಗಿ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next