Advertisement

ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಬೇಡ: ಶೋಭಾ

03:45 AM Jan 28, 2017 | Team Udayavani |

ಮೈಸೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುವ ಹಂತದಲ್ಲಿರುವಾಗ ರಾಜ್ಯ ಸರ್ಕಾರ ತರಾತುರಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತಿರುವುದು ಸರಿಯಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.

Advertisement

ಮುಂದಿನ ಶೈಕ್ಷಣಿಕ ವರ್ಷದೊಳಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದೆ. ಹೀಗಾಗಿ ಕೇವಲ ಒಂದು ವರ್ಷದ ಅವಧಿಗೆ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದರಿಂದ ಕೋಟ್ಯಂತರ ರೂ. ವೆಚ್ಚದ ಜೊತೆಗೆ ಶಿಕ್ಷಕರು ಹಾಗೂ ಮಕ್ಕಳಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಅಲ್ಲದೇ ಮಕ್ಕಳಿಗೆ ಮಾನಸಿಕ ಹಿಂಸೆ ನೀಡಿದಂತಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪಠ್ಯಪುಸ್ತಕ ಪರಿಷ್ಕರಣೆಯ ಕರಡು ಪ್ರತಿ ಈವರೆಗೆ ಯಾರ ಕೈಗೂ ಸಿಕ್ಕಿಲ್ಲ. ಈ ಬಗ್ಗೆ ಶಿಕ್ಷಣ ತಜ್ಞರು, ಸಾರ್ವಜನಿಕರ ಮಧ್ಯೆ ಚರ್ಚೆಗಳಾಗಿಲ್ಲ. ಆದರೂ ಪೊ›.ಬರಗೂರು ರಾಮಚಂದ್ರಪ್ಪಅವರನ್ನು ಮೆಚ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಹೊಸ ಪಠ್ಯಪುಸ್ತಕ ಮುದ್ರಣಕ್ಕೆ ಸೂಚಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next