Advertisement

Mangaluru ಬೆದರಿಕೆಗೆ ಜಗ್ಗದೆ ಕಾನೂನು ಪ್ರಕಾರ ಕಾರ್ಯ ನಿರ್ವಹಿಸಿ: ರಮಾನಾಥ ರೈ ಸೂಚನೆ

11:44 PM Aug 22, 2023 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಸಕರು ಹಾಗೂ ಸಂಸದರು ಅಧಿಕಾರಿಗಳ ಮೇಲೆ ಬೆದರಿಕೆ ತಂತ್ರವನ್ನು ಅನುಸರಿಸುತ್ತಿದ್ದಾರೆ. ಅಧಿಕಾರಿಗಳು ಮಾತ್ರ ಇದಕ್ಕೆ ಜಗ್ಗದೆ ಕಾನೂನು ಪ್ರಕಾರವೇ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರ ಕಳೆದು ಕೊಂಡ ಬಳಿಕ ಜಿಲ್ಲೆಯ ಬಿಜೆಪಿ ಜನಪ್ರತಿನಿಧಿಗಳು ನೀರಿನಿಂದ ತೆಗೆದ ಮೀನಿನಂತಾಗಿದ್ದಾರೆ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದ ವೇಳೆ ಅಕ್ರಮ ಸಕ್ರಮ ಸಮಿತಿಯಡಿ 71 ಪ್ರಕರಣಗಳು ಕಾನೂನು ಬಾಹಿರವಾಗಿ ನಡೆಸಿರುವ ಬಗ್ಗೆ ಈಗಾಗಲೇ ದೂರು ನೀಡಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಅಧಿಕಾರಿಗಳನ್ನು ಹೆದರಿಸುವ ಕೆಲಸ ಕೆಲವು ಕಡೆ ನಡೆಯುತ್ತಿದೆ. ಬಿಜೆಪಿ ಆಡಳಿತ ಕಾಲದಲ್ಲಿ ಅವರು ಇದನ್ನೇ ಮಾಡುತ್ತಾ ಬಂದಿದ್ದಾರೆ. ಈಗ ಅದನ್ನೇ ಮುಂದುವರಿಸಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳು ಜಗ್ಗಬಾರದು ಎಂದು ಹೇಳಿದ ಅವರು, ಶಿಷ್ಟಾಚಾರ ನೆಪದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಾಗಿಲಲ್ಲಿ ನಡೆದ ಬಿಜೆಪಿ ಜನಪ್ರತಿನಿಧಿಗಳ ಪ್ರತಿಭಟನೆಯನ್ನು ಕಾಂಗ್ರೆಸ್‌ ಖಂಡಿಸುವುದಾಗಿ ಹೇಳಿದರು.

ಮುಖಂಡರಾದ ಇಬ್ರಾಹಿಂ ಕೋಡಿಜಾಲ್‌, ಎಂ. ಶಶಿಧರ ಹೆಗ್ಡೆ, ಲ್ಯಾನ್ಸಿ ಲಾಟ್‌ಪಿಂಟೋ, ಶುಭೋದಯ ಆಳ್ವ, ಜಯಶೀಲ ಅಡ್ಯಂತಾಯ, ಶಾಹುಲ್‌ ಹಮೀದ್‌, ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next