Advertisement
ಸೋಮವಾರ, ಪಿ.ಜೆ ಬಡಾವಣೆಯ ಬಾಪೂಜಿ ಪ್ರೌಢಶಾಲೆಯಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಮಾರಂಭ ಉದ್ಘಾಟಿಸಿ, ಮಾತನಾಡಿದ ಅವರು, ಎಲ್ಲಾ ಮಕ್ಕಳಲ್ಲೂ ವಿಭಿನ್ನವಾದ ಆಸಕ್ತಿ, ಕೌಶಲ್ಯ ಇರುತ್ತದೆ. ಅದನ್ನ ಹೊರ ಹೊಮ್ಮಿಸಲು ಸರ್ಕಾರ ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶಮಾಡಿಕೊಡುತ್ತಿದೆ. ಮಕ್ಕಳು ಇಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
Related Articles
ಮಕ್ಕಳು ರಾಜ್ಯಮಟ್ಟದಲ್ಲೂ ಉತ್ತಮ ಪ್ರದರ್ಶನದ ಮೂಲಕ ಜಿಲ್ಲೆಗೆ, ಶಾಲೆಗೆ ಕೀರ್ತಿ ತರಬೇಕು ಎಂದು ಆಶಿಸಿದರು.
Advertisement
ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್.ಬಸವಂತಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಮೊಬೈಲ್ ಬಳಕೆಯ ಮೂಲಕ ಮಕ್ಕಳು ಸಾಹಿತ್ಯ, ಕಲೆಗಳಿಂದ ವಿಮುಖರಾಗುತ್ತಿದ್ದಾರೆ. ವಿದ್ಯಾರ್ಥಿ ದಿಸೆಯಲ್ಲಿ ಸ್ಮಾರ್ಟ್ ಪೋನ್‌ಗಳ ಬಳಕೆಯ ಅವಶ್ಯಕತೆ ಆದರೂ ಏನಿದೆ?. ಮಕ್ಕಳು ಮೊಬೈಲ್‌ನಿಂದ ದೂರವಿದ್ದು, ತಮ್ಮ ಜೀವನದ ಗುರಿ ಸಾಧನೆಗೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಪೋಷಕರುಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಪ್ರಾಸ್ತಾವಿಕ ಮಾತನಾಡಿ, ಮಕ್ಕಳು ಕೇವಲ ಪಠ್ಯ ಚಟುವಟಿಕೆಗೆ ಸೀಮಿತರಾಗಬಾರದು. ಮಕ್ಕಳಲ್ಲಿ ಪಠ್ಯ ಮತ್ತು ಪಠ್ಯೇತರ ವಿಷಯಗಳಲ್ಲಿ ಆಸಕ್ತಿ ಇರುತ್ತದೆ. ಅದನ್ನು ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶೈಲಜಾ ಬಸವರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ನಿರಂಜನ್, ಉಪ ಸಮನ್ವಯಾಧಿಕಾರಿ ಬಿ. ಆರ್. ಬಸವರಾಪ್ಪ, ಪಾಲಿಕೆ ಸದಸ್ಯ ದಿನೇಶ್ ಕೆ.ಶೆಟ್ಟಿ, ಸಾಕಮ್ಮ ಗಂಗಾಧರಪ್ಪ, ಸಿದ್ದೇಶ್ ಇತರರು ಉಪಸ್ಥಿತರಿದ್ದರು. ಪ್ರತಿಭಾ ಕಾರಂಜಿ ಹಾಗು ಕಲೋತ್ಸವ ಸ್ಪರ್ಧೆಯಲ್ಲಿ ದಾವಣಗೆರೆ ಜಿಲ್ಲೆಯ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಂದ 1000 ಮಕ್ಕಳು, 300 ಶಿಕ್ಷಕರು ಭಾಗವಹಿಸಿದ್ದರು.