Advertisement

ನಿರ್ದಿಷ್ಟ ವಿಷಯಕ್ಕೆ ಸೀಮಿತರಾಗಬೇಡಿ: ರಮೇಶ್‌ ಸಲಹೆ

02:25 PM Aug 19, 2017 | |

ದಾವಣಗೆರೆ: ನಿರ್ದಿಷ್ಟ ವಿಷಯಕ್ಕೆ ಸೀಮಿತಗೊಳ್ಳುವ ಶೈಕ್ಷಣಿಕ ವ್ಯವಸ್ಥೆಯಿಂದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹೊರ ಬರಬೇಕು ಎಂದು ಜಿಲ್ಲಾಧಿಕಾರಿ ಡಿ. ಎಸ್‌. ರಮೇಶ್‌ ಸಲಹೆ ನೀಡಿದ್ದಾರೆ.

Advertisement

ಶುಕ್ರವಾರ, ತೋಳಹುಣಸೆ ಗ್ರಾಮದ ಹೊರವಲಯದ ದಾವಣಗೆರೆ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವವಿದ್ಯಾನಿಲಯದ 9ನೇ ವರ್ಷದ ಸಂಸ್ಥಾಪನಾ ದಿನಾಚಾರಣೆ ಉದ್ಘಾಟಿಸಿ, ಮಾತನಾಡಿದ ಅವರು, ವಿಶ್ವವಿದ್ಯಾನಿಲಯಗಳು ಯೂನಿವರ್ಸಲ್‌ ಎನ್ನುವ ಸಿದ್ಧಾಂತ ಹೊಂದಿರುತ್ತವೆ. ಆದ್ದರಿಂದ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಾಂಗ ಮಾಡುವ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯದ ಬಗ್ಗೆ ಜ್ಞಾನ ಹೊಂದಿರಬೇಕು. ಆದರೆ, ಇಂದು ವಿಶ್ವವಿದ್ಯಾನಿಲಯದಲ್ಲಿನ ವಿದ್ಯಾರ್ಥಿಗಳು ಒಂದು ವಿಷಯದ ಅಧ್ಯಯನಕ್ಕೆ ಸೀಮಿತಗೊಳ್ಳುತ್ತಿದ್ದಾರೆ. ಇದು ಇತರೆ ವಿಷಯಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗುತ್ತಿಲ್ಲ ಎಂದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಬಿ.ಬಿ. ಕಲಿವಾಳ ಮಾತಾನಾಡಿ, ದಾವಿವಿ ಸ್ಥಾಪನೆಗೆ ಅನೇಕ ಗಣ್ಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಪ್ರಸ್ತುತ ವಿಶ್ವವಿದ್ಯಾನಿಲಯವು 251 ಎಕರೆ ವಿಸ್ತೀರ್ಣ ಹೊಂದಿದೆ. ಹಾಲುವರ್ತಿ ಸಮೀಪ ಸರ್ಕಾರ 72 ಎಕರೆ ಜಮೀನು ವಿಶ್ವವಿದ್ಯಾನಿಲಯಕ್ಕೆ ನೀಡಿದೆ. ಇದಕ್ಕೆ ಹೊಂದಿಕೊಂಡಂತಿರುವ 40 ಎಕರೆ ಹೆಚ್ಚುವರಿ ಅರಣ್ಯ ಪ್ರದೇಶವನ್ನು ಸರ್ಕಾರ ವಿಶ್ವವಿದ್ಯಾನಿಲಯಕ್ಕೆ ನೀಡಿದರೆ ಅದನ್ನು ಬಟಾನಿಕಲ್‌ ಗಾರ್ಡನ್‌ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು. ಇದರಿಂದ ಔಷ ಧ ಆಧಾರಿತ ಸಸ್ಯಗಳನ್ನು ಬೆಳೆಸಲು ಅನುಕೂಲವಾಗುವುದು. ಈ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ಕುಲಸಚಿವ ಪ್ರೊ| ಎಸ್‌.ವಿ. ಹಲಸೆ, ಹಣಕಾಸು ನಿರ್ವಹಣಾ ಅಧಿಕಾರಿ ಪ್ರೊ| ಎಚ್‌.ಎಸ್‌. ಅನಿತಾ, ಮೌಲ್ಯಮಾಪನ ಕುಲಸಚಿವ ಕೆ.ಎನ್‌. ಗಂಗಾನಾಯ್ಕ, ಸಿಂಡಿಕೇಟ್‌ ಸದಸ್ಯರಾದ ಡಾ| ಎಚ್‌. ವಿಶ್ವನಾಥ್‌, ಕೊಂಡಜ್ಜಿ ಜಯಪ್ರಕಾಶ್‌ ಕಾರ್ಯಕ್ರಮದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next