Advertisement

“ವಿದ್ಯಾರ್ಥಿಗಳು ಆಕರ್ಷಣೆ, ಆಮಿಷಗಳಿಗೆ ಒಳಗಾಗದಿರಿ’

11:34 PM Jul 10, 2019 | Team Udayavani |

ಮಹಾನಗರ: ಶಿಕ್ಷಣ ನಮ್ಮನ್ನು ಬಲಿಷ್ಠರನ್ನಾಗಿ ಮಾಡಬೇಕು. ಯಾವುದೇ ಆಕರ್ಷಣೆ, ಆಮಿಷಗಳಿಗೆ ಒಳಗಾಗದೆ ನಿರ್ದಿಷ್ಟ ಗುರಿಯ ಕಡೆಗೆ ನಮ್ಮನ್ನು ಕೊಂಡೊಯ್ಯಬೇಕು ಎಂದು ನಗರದ ಉಪಪೊಲೀಸ್‌ ಆಯುಕ್ತ ಹನುಮಂತರಾಯ ಹೇಳಿದರು.

Advertisement

ನಗರದ ಶಾರದಾ ಪದವಿಪೂರ್ವ ಕಾಲೇಜಿನ 2019-20ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದ ಗುರಿ ಕೇವಲ ಅಂಕಗಳಿಕೆಗೆ, ರ್‍ಯಾಂಕ್‌ ಗಳಿಕೆಗೆ ಸೀಮಿತವಾಗಬಾರದು. ಅದರ ಜತೆಗೆ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ – ದೇಶಕ್ಕೆ ಅಮೂಲ್ಯ ಸಂಪತ್ತಾಗಿ ನಮ್ಮನ್ನು ಪರಿವರ್ತಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಮಹಾ ಬಲೇಶ್ವರ ಭಟ್‌ ಸೊಡಂಕೂರು ಚುನಾ ಯಿತ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕಳೆದ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಶಾರದಾ ಪ.ಪೂ. ಕಾಲೇಜಿನಲ್ಲಿ ಪ್ರವೇಶ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಶೇ.97ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸಿದ ಸುಮಾರು 30ವಿದ್ಯಾರ್ಥಿಗಳಿಗೆ ಒಟ್ಟು 11.50 ಲಕ್ಷ ರೂ. ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.

Advertisement

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ. ಬಿ. ಪುರಾಣಿಕ್‌ ಅಧ್ಯಕ್ಷತೆ ವಹಿಸಿದ್ದರು. ಶಾರದಾ ಶಿಕ್ಷಣ ಸಂಸ್ಥೆಗಳ ಟ್ರಸ್ಟಿಗಳಾದ ಪ್ರದೀಪ್‌ ಕುಮಾರ್‌ ಕಲ್ಕೂರ, ಎಸ್‌.ಕೆ.ಡಿ.ಬಿ. ಅಸೋಸಿಯೇಶನ್‌ನ ಅಧ್ಯಕ್ಷ ಪ್ರಭಾಕರ್‌ ರಾವ್‌ ಪೇಜಾವರ, ಶಾರದಾ ಶಿಕ್ಷಣ ಸಂಸ್ಥೆಗಳ ಸಲಹೆಗಾರರಾದ ಡಾ| ಲೀಲಾ ಉಪಾಧ್ಯಾಯ, ಶಾರದಾ ಪ.ಪೂ. ಕಾಲೇಜಿನ ಪ್ರಾಂಶುಪಾಲ ಮಹಾಬಲೇಶ್ವರ ಭಟ್‌ ಸೊಡಂಕೂರು, ಉಪ ಪ್ರಾಂಶುಪಾಲರಾದ ಪ್ರಕಾಶ್‌ ನಾೖಕ್‌, ವಿದ್ಯಾರ್ಥಿ ಕ್ಷೇಮಪಾಲಕರಾದ ಆಶಾ ಎಸ್‌. ಕಾರಂತ್‌, ಗಣೇಶ್‌ ಶೆಟ್ಟಿಗಾರ್‌ ಉಪಸ್ಥಿತರಿದ್ದರು. ಕೃಷ್ಣಾ ಸ್ವಾಗತಿಸಿದರು. ಶಮ್ಯಾ ಶೆಟ್ಟಿ ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಅನುಪಮಾ ಜಿ. ಕೆ. ಅತಿಥಿಗಳ ಪರಿಚಯ ಮಾಡಿದರು. ಅರ್ಜುನ್‌ ಭಂಡಾರಿ ನಿರ್ವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next