ಬೆಂಗಳೂರು: ಹಿಜಾಬ್ ವಿವಾದ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಈ ವಿಚಾರವಾಗಿ ರಾಜ್ಯದ ಜನತೆ ಹಾಗು ತನ್ನ ಕಾರ್ಯಕರ್ತರಲ್ಲಿ ಬಿಜೆಪಿ ಪಕ್ಷ ಕೆಲವು ಮನವಿಯನ್ನು ಮಾಡಿದೆ.
ಹಿಜಾಬ್ ತೀರ್ಪು ಕುರಿತು ಯಾವುದೇ ಪ್ರತಿಭಟನೆಯನ್ನು ಮಾಡಬಾರದು. ಜೊತೆಗೆ ಪ್ರತಿಕ್ರಿಯಾತ್ಮಕ ಪತ್ರಿಕೆ ಹೇಳಿಕೆಗಳನ್ನು ನೀಡಬೇಡಿ ಎಂದು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದೆ.
ಇದನ್ನೂ ಓದಿ:ಹಿಜಾಬ್ ಕುರಿತಾಗಿ ‘ಹೈ’ ತೀರ್ಪು: ಮಹತ್ತರ ತೀರ್ಪಿನಲ್ಲಿ ಹೈಕೋರ್ಟ್ ಉಲ್ಲೇಖಿಸಿದ ಅಂಶಗಳೇನು?
ಸಾಕಷ್ಟು ವಿವಾದವನ್ನು ಹುಟ್ಟುಹಾಕಿದ್ದ ಹಿಜಾಬ್ ಕುರಿತು ಎಲ್ಲವನ್ನು ಕೂಲಂಕುಷವಾಗಿ ಗಮನಿಸಿ ಹೈಕೋರ್ಟ್ ತೀರ್ಪು ನೀಡಿದ್ದು ಎಲ್ಲರು ನ್ಯಾಯಾಲಯದ ಆದೇಶವನ್ನು ಶಾಂತವಾಗಿ ಸ್ವೀಕರಿಸಬೇಕು ಎಂದು ಮನವಿ ಮಾಡಿದೆ.
“ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಪ್ರಕಟವಾಗಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲ ಕಾರ್ಯಕರ್ತರು ಅತ್ಯಂತ ಸಮಚಿತ್ತದಿಂದ ಸ್ವೀಕರಿಸಬೇಕು. ಯಾವುದೇ ಅನಗತ್ಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ವಿಜಯೋತ್ಸವ, ಮೆರವಣಿಗೆ ಮಾಡಬಾರದು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ವಿದ್ಯೆಗಿಂತ ದೊಡ್ಡದು ಯಾವುದೂ ಇಲ್ಲ, ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು: ಬೊಮ್ಮಾಯಿ