Advertisement

ನಾಯಕತ್ವ ಬದಲಾವಣೆ ಹಗಲು ಕನಸು ಕಾಣಬೇಡಿ: ಅಶೋಕ್‌

10:04 PM May 03, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಯಾರೂ ಹಗಲು ಕನಸು ಕಾಣಬೇಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

Advertisement

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕತ್ವದ ಪ್ರಶ್ನೆ ಮಾಧ್ಯಮದಲ್ಲಿ ಮಾತ್ರ ಬರುತ್ತಿದೆ. ಕೇಂದ್ರದ ಸಹಕಾರ ಸಂಪೂರ್ಣವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮೇಲಿದೆ. ಬಿಸಿಲು ಕುದುರೆ ಹಿಂದೆ ಹೋಗಬೇಡಿ. ಬೊಮ್ಮಾಯಿಯವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಸ್ವಪಕ್ಷದವರಿಗೆ ಅವರು ಟಾಂಗ್‌ ನೀಡಿದ್ದಾರೆ.

ಅಲ್ಲದೇ ಪಕ್ಷದಲ್ಲಿಯೂ ನಳಿನ್‌ ಕುಮಾರ್‌ ಕಟೀಲು ಅವರೇ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. ಪಕ್ಷದ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಆರ್‌.ಅಶೋಕ್‌ ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next