Advertisement

ಮದ್ಯ ಮಾರಾಟಕ್ಕೆ ಅವಕಾಶ ಬೇಡ

05:32 PM May 04, 2020 | Team Udayavani |

ಅರಸೀಕೆರೆ: ಕೋವಿಡ್ 19 ಸೋಂಕು ಸಂಪೂರ್ಣ ಮುಕ್ತವಾಗುವವರೆಗೆ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡಬಾರದು ಎಂದು ರೈತ ಸಂಘದ ಮುಖಂಡ ಕನಕಂಚೇನಹಳ್ಳಿ ಪ್ರಸನ್ನ ಕುಮಾರ್‌ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮದ್ಯ ಮಾರಾಟ ನಿಷೇಧ ದಿಂದಾಗಿ ಗ್ರಾಮೀಣ ಭಾಗದಲ್ಲಿ ಮದ್ಯ ವ್ಯಸನಿಗಳಿಂದ ಆಗುತ್ತಿದ್ದ ಗಲಾಟೆ ನಿಂತಿದೆ. ಸರ್ಕಾರ ಆರ್ಥಿಕ ದೃಷ್ಟಿಯಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದರೆ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತವಾಗುವ ಜೊತೆಗೆ ನೆಮ್ಮದಿ ಹಾಳಾಗುತ್ತದೆ ಎಂದಿದ್ದಾರೆ. ಹೂವು ಬೆಳೆದು ನಷ್ಟಕ್ಕೊಳ ಗಾಗಿರುವ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ನೀಡ ಬೇಕು ಎಂದು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next