Advertisement
ಆಟದ ಮೈದಾನ ಮತ್ತು ಉದ್ಯಾನವನದ ಜಾಗಗಳನ್ನು ಹೊರತುಪಡಿಸಿ ಬೇರೆ ಕಡೆ ಇಂದಿರಾ ಕ್ಯಾಂಟೀನ್‌ಗೆ ಸ್ಥಳ ಗುರುತಿಸಬೇಕು. ತಕ್ಷಣವೇ ಈ ಕುರಿತು ಕ್ರಮ ಕೈಗೊಂಡು ನಿಗದಿತ ಅವಧಿಯೊಳಗೆ ಕ್ಯಾಂಟೀನ್ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಕೆಲಸಗಳನ್ನು ಮುಗಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
Related Articles
Advertisement
ಈ ಕುರಿತು ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಉದ್ದೇಶದ ಚಟುವಟಿಕೆಗಳನ್ನು ನಡೆಸದಂತೆ ಹೈಕೋರ್ಟ್ ಆದೇಶಿಸಿದೆ. ಈ ಆದೇಶದ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರು ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆ ಸ್ಥಗಿತಗೊಳಿಸುವಂತೆ ಮಳಿಗೆಗಳಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ಆದರೀಗ ವಸತಿ ಪ್ರದೇಶಗಳಲ್ಲಿ ಪಾಲಿಕೆಯಿಂದಲೇ ಹೇಗೆ ಇಂದಿರಾ ಕ್ಯಾಂಟಿನ್ ಆರಂಭಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ನಗರದ 198 ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣಕ್ಕೆ 60 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಆದರೆ, ಅಲ್ಪಾವಧಿ ಟೆಂಡರ್ ಸಹ ಕರೆಯದೆ ನೇರವಾಗಿ ಗುತ್ತಿಗೆ ನೀಡಲಾಗಿದೆ. ಇದರೊಂದಿಗೆ ತೆರಿಗೆ ಪಾವತಿಸದೆ 4ಜಿ ಅಡಿಯಲ್ಲಿ ವಿನಾಯಿತಿ ಸಹ ಪಡೆದುಕೊಳ್ಳಲಾಗಿದೆ ಎಂದು ದೂರಿದರು.
ವಿವಿಧ ಇಲಾಖೆಯಿಂದ 78 ಕಡೆ ಸ್ಥಳನಗರದ ಎಲ್ಲ ಭಾಗಗಳಲ್ಲಿ ಕ್ಯಾಂಟಿನ್‌ಗೆ ಜಾಗ ದೊರೆಯದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳಿಂದ 78 ಕಡೆ ಸ್ಥಳ ಪಡೆಯಲಾಗಿದ್ದು, ನಗರ ಜಿಲ್ಲಾಡಳಿತದಿಂದಲೇ 23 ಕಡೆ ನಿವೇಶನ ನೀಡಲಾಗಿದೆ. ಉಳಿದಂತೆ ಬಿಡಿಎ 16, ಬಿಎಂಟಿಸಿ 5, ಜಲಮಂಡಳಿ 5, ಬಿಎಂಆರ್‌ಸಿಎಲ್ 4, ಕರ್ನಾಟಕ ಗೃಹ ಮಂಡಳಿ 3, ಆರೋಗ್ಯ ಇಲಾಖೆ 3, ಅರಣ್ಯ 3, ಶಿಕ್ಷಣ 2, ಹಿಂದೂ ಧಾರ್ಮಿಕ ದತ್ತಿ ಇಲಾಖೆ 2, ಕೆಪಿಟಿಸಿಎಲ್ 2, ಎಚ್‌ಎಎಲ್, ಕೃಷಿ ಮಾರುಕಟ್ಟೆ, ಕೊಳಚೆ ನಿರ್ಮೂಲನೆ ಮಂಡಳಿ, ಮಹಾಬೋಧಿ ಸೊಸೈಟಿ, ಲೋಕೋಪಯೋಗಿ, ಕೃಷಿ ಇಲಾಖೆ, ಕೆಎಸ್‌ಎಸ್‌ಐಡಿಸಿ, ಪಶು ಸಂಗೋಪನೆ ಇಲಾಖೆಯಿಂದ ತಲಾ ಒಂದು ಕಡೆ ಸ್ಥಳ ಪಡೆಯಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಕಾಯ್ದೆಯಲ್ಲೇನಿದೆ?
ಕರ್ನಾಟಕ ಉದ್ಯಾನ, ಆಟದ ಮೈದಾನ ಮತ್ತು ಖಾಲಿ ಜಾಗಗಳ ಸಂರಕ್ಷಣೆ ಹಾಗೂ ನಿಯಂತ್ರಣ ನಿಯಮಗಳು 1985ರಂತೆ 5 ಎಕರೆಗಿಂತ ಕಡಿಮೆಯಿರುವ ಉದ್ಯಾನ ಹಾಗೂ ಮೈದಾನಗಳಲ್ಲಿ ಶೌಚಾಲಯ ಸಂಕೀರ್ಣದಂತಹ ಅತ್ಯಗತ್ಯ ಮೂಲ ಸೌಕರ್ಯ ಕಟ್ಟಡಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾಮಗಾರಿ ನಡೆಸುವಂತಿಲ್ಲ. ಉದ್ಯಾನ ಹಾಗೂ ಆಟದ ಮೈದಾನದ ಜಾಗದಲ್ಲಿ ಕ್ಯಾಂಟಿನ್ ನಿರ್ಮಿಸದಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ನಿಗದಿತ ವಾರ್ಡ್‌ನಲ್ಲಿ ಕ್ಯಾಂಟೀನ್ ನಿರ್ಮಾಣಕ್ಕೆ ಜಾಗ ದೊರೆಯದಿದ್ದರೆ, ಆ ವಾರ್ಡ್‌ಗೆ ಸಮೀಪವಿರುವ ವಾರ್ಡ್‌ನಲ್ಲಿ ಜಾಗ ಗುರುತಿಸುವಂತೆ ನಿರ್ದೇಶನ ನೀಡಲಾಗಿದೆ.
-ಎನ್. ಮಂಜುನಾಥ ಪ್ರಸಾದ್, ಬಿಬಿಎಂಪಿ ಆಯುಕ್ತ ಇಂದಿರಾ ಕ್ಯಾಂಟಿನ್ ಯೋಜನೆ ಜಾರಿಗೆ ಸಕಲ ಸಿದ್ಧತೆ ನಡೆಸಲಾಗಿದ್ದು, ಸಾರ್ವಜನಿಕರಿಂದ ಯೋಜನೆಗೆ ವಿರೋಧ ವ್ಯಕ್ತವಾಗಿಲ್ಲ. ಪ್ರತಿಪಕ್ಷ ಬಿಜೆಪಿಯೇ ಅನಗತ್ಯವಾಗಿ ಅಡ್ಡಿಪಡಿಸುವ ಮೂಲಕ ಜನರಿಗೆ ಅನುಕೂಲವಾಗುವ ಯೋಜನೆಯಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ.
-ಜಿ. ಪದ್ಮಾವತಿ, ಪಾಲಿಕೆ ಮೇಯರ್