Advertisement

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬೇಡ

11:02 PM Jun 01, 2019 | Team Udayavani |

ಮೈಸೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆಯೂ ಬೇಡ, ರಾಷ್ಟ್ರಪತಿ ಆಳ್ವಿಕೆಯೂ ಬೇಡ. ಬಿಜೆಪಿ ಬಗ್ಗೆ ಕಾಂಗ್ರೆಸ್‌ಗೆ ಅಷ್ಟೊಂದು ದ್ವೇಷ ಏಕೆ ಎಂದು ಪೇಜಾವರ ಮಠಾಧೀಶ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಪ್ರಶ್ನಿಸಿದ್ದಾರೆ.

Advertisement

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಜತೆ ಸೇರಿರುವಾಗ ಬಿಜೆಪಿಯನ್ನು ಏಕೆ ದೂರ ಇಡಬೇಕು. ಕಾಂಗ್ರೆಸ್‌ನವರು ನಮ್ಮ ಶಾಸಕರು ಹೋಗುತ್ತಾರೆ ಎಂದು, ಬಿಜೆಪಿಯವರು ನಮ್ಮ ಶಾಸಕರು ಹೋಗುತ್ತಾರೆ ಎನ್ನುವ ಮೂಲಕ ಭಯದ ವಾತಾವರಣ ಸೃಷ್ಟಿಸಿದ್ದಾರೆ.

ಇದು ಹೋಗಿ ಎಲ್ಲರೂ ಒಟ್ಟಾಗಿ ಅಭಿವೃದ್ಧಿ ಕಡೆಗೆ ಗಮನಕೊಡಲಿ ಎಂದರು. ಅಲ್ಲದೆ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಅಂತವರು ಸೋತಿದ್ದಕ್ಕೆ ಬೇಸರವಿದೆ ಎಂದು ಹೇಳಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಲೇಬೇಕು. ಬಿಜೆಪಿ ಸಂಸತ್ತಿನಲ್ಲಿ ದೊಡ್ಡ ಸಂಖ್ಯಾಬಲ ಹೊಂದಿರುವುದರಿಂದ ಏನು ಬೇಕಾದರೂ ನಿರ್ಣಯ ಮಾಡಬಹುದು. ಸರ್ವೋಚ್ಚ ನ್ಯಾಯಾಲಯಕ್ಕಿಂತ ಸಂಸತ್ತು ದೊಡ್ಡದು.

ರಾಹುಲ್‌ಗಾಂಧಿ ಕೂಡ ರಾಮ ಮಂದಿರ ನಿರ್ಮಾಣಕ್ಕೆ ಸಹಕಾರ ಕೊಡಬೇಕು. ಗೋಹತ್ಯೆ ನಿಷೇಧವಾಗಬೇಕು. ಜಮ್ಮುವಿನಲ್ಲಿ ಹಿಂದೂಗಳಿಗೆ ತೊಂದರೆ ಇದೆ. ಕಾಶ್ಮೀರದಲ್ಲಿ ಮುಸ್ಲಿಮರಿಗೆ ತೊಂದರೆ ಇದೆ. ಹೀಗಾಗಿ, ಪ್ರಧಾನಿ ಮೋದಿ ನಾಜೂಕಿನಿಂದ ಕಾಶ್ಮೀರ ಸಮಸ್ಯೆ ಬಗೆಹರಿಸಬೇಕು. ಯುವಕರಿಗೆ ಉದ್ಯೋಗ ಸೃಷ್ಟಿಯಾಗಬೇಕು. ಕೃಷಿಗೆ ಅಡ್ಡಿಯಾಗದಂತೆ ಉದ್ಯಮ ಸ್ಥಾಪನೆಯಾಗಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next