Advertisement
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆಂದು ಆಗ್ರಹಿಸಿ ಬಂದ್ ನಡೆಸುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ತಮಿಳುನಾಡು ಸರ್ಕಾರದ ಕ್ರಮ ಖಂಡನೀಯ. ತಮಿಳುನಾಡಿನ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿದರೆ, ರಾಜ್ಯದ ಜನತೆಗೆ ಮೋಸ ಮಾಡಿದಂತಾಗಲಿದೆ.
ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಒತ್ತಾಯಿಸಿ ತಮಿಳುನಾಡು ಬಂದ್‌ಗೆ ಕರೆ ನೀಡಿರುವುದನ್ನು ಖಂಡಿಸಿ, ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
Related Articles
Advertisement
ಅಲ್ಲದೆ, ಸುಪ್ರೀಂಕೋರ್ಟ್ ತೀರ್ಪಿಗೆ ಗೌರವ ನೀಡದೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ತಮಿಳುನಾಡು ಬಂದ್‌ಗೆ ಕರೆ ಕೊಟ್ಟಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಕರ್ನಾಟಕ ರಾಜಾದ್ಯಂತ ಒಂದು ತಿಂಗಳವರಗೆ ಪ್ರತಿಭಟನೆ ಹಮ್ಮಿಕೊಂಡು ತಮಿಳನಾಡಿಗೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸೇನಾ ಪಡೆಯ ಗೌರವ ಅಧ್ಯಕ್ಷ ಶಾ.ಮುರಳಿ ಮಾತನಾಡಿ, ತಮಿಳುನಾಡು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ಬಂದ್‌ಗೆ ಕರೆ ನೀಡಿರುವುದು ನಾಚಿಗೇಡಿನ ಸಂಗತಿಯಾಗಿದೆ. ಕಾವೇರಿ ನೀರು ವಿಚಾರದಲ್ಲಿ ತಮಿಳುನಾಡು ಸರ್ಕಾರ ಬೀದಿಗಿಳಿದು ಪದೇಪದೇ ಕ್ಯಾತೆ ತೆಗೆಯುವ ಪರಿಪಾಠ ಬಿಡಬೇಕು.
ಇಲ್ಲದಿದ್ದರೆ, ಕನ್ನಡಿಗರು ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಕನ್ನಡ ಚಳವಳಿ ಮುಖಂಡರಾದ ಗು.ಪುರುಷೋತ್ತಮ, ಪಣ್ಯದಹುಂಡಿರಾಜು, ನಿಜದ್ವನಿ ಗೋವಿಂದರಾಜು, ಡಾ.ಶಿವರುದ್ರಸ್ವಾಮಿ, ನಟರಾಜು, ರಮೇಶ್‌ಕಾರ್ಮಿಕ್, ಮಿಠಾಯಿಲಿಂಗಣ್ಣ, ಸುರೇಶ್‌ನಾಗ್ ಭಾಗವಹಿಸಿದ್ದರು.