Advertisement
ಕೆಲಸಕ್ಕೆ ಮಹಿಳೆಯರನ್ನು ನೇಮಕ ಮಾಡಿಕೊಂಡ ಕಾರಣಕ್ಕೆ ದಾಳಿ ನಡೆಸಿ ನಗರದ 27 ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳನ್ನು ಮುಚ್ಚಿಸಿದ್ದ ಸಿಸಿಬಿ ಕ್ರಮ ಪ್ರಶ್ನಿಸಿ ಕರ್ನಾಟಕ ಹೊಟೇಲ್ಸ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಓನರ್ ಅಸೋಸಿಯೇಷನ್ ಆ್ಯಂಡ್ ವರ್ಕಿಂಗ್ ವುಮೆನ್ ವೆಲ್‌ಫೇರ್ ಅಸೋಸಿಯೇಷನ್ ಹಾಗೂ ಬಾರ್ ಮಾಲೀಕರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾ.ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
Related Articles
Advertisement
ಸದ್ಯ ಈ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳನ್ನು ಮುಚ್ಚಲ್ಪಟ್ಟಿರುವುದರಿಂದ ಇಲ್ಲಿ ಕೆಲಸ ಮಾಡುವ ಸಾವಿರಕ್ಕೂ ಹೆಚ್ಚು ಮಹಿಳೆಯರ ಕುಟುಂಬಗಳು ಬೀದಿಪಾಲಾಗಿವೆ. ಜತೆಗೆ ಸಾವಿರಕ್ಕೂ ಹೆಚ್ಚು ಪುರಷರು ಸಹ ಕೆಲಸವಿಲ್ಲದೇ ಅತಂತ್ರ ಸ್ಥಿತಿ ಅನುಭವಿಸುತ್ತಿದ್ದಾರೆ.
ಪೊಲೀಸರು ತಮ್ಮ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಾರೆ. ಬಾರ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಸಿಸಿಟಿವಿ ಅಳವಡಿಸಿ ಅಲ್ಲಿ ನಡೆಯುವ ಚಟುವಟಿಕೆಗಳನ್ನು ಪೊಲೀಸ್ ಠಾಣೆಗಳಿಗೆ ನೇರ ಪ್ರಸಾರ ಮಾಡುವ ವ್ಯವಸ್ಥೆ ಮಾಡಲಾಗಿದೆ. ಆದರೂ ಪೊಲೀಸರು ವಿನಾಕಾರಣ ನಮಗೆ ತೊಂದರೆ ನೀಡುತ್ತಿದ್ದಾರೆ ಎಂದು ಬಾರ್ ಮಾಲೀಕರು ದೂರಿದ್ದಾರೆ.
ಪ್ರಕರಣವೇನು?: ನಗರದ ವಿವಿಧೆಡೆ ಸೆ.28ರಂದು ದಾಳಿ ನಡೆಸಿದ ಸಿಸಿಬಿ ಪೊಲೀಸರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗಿದೆ ಎಂಬ ಕಾರಣಕ್ಕೆ 27 ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳನ್ನು ಬಲವಂತವಾಗಿ ಮುಚ್ಚಿಸಿದ್ದರು. ಯಾವುದೇ ನೋಟಿಸ್ ನೀಡದೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಕೆಲಸಕ್ಕೆ ಮಹಿಳೆಯನ್ನು ನೇಮಕ ಮಾಡಿಕೊಳ್ಳಬಾರದು ಎಂಬ ಸರ್ಕಾರದ ಯಾವುದೇ ಲಿಖೀತ ಆದೇಶವನ್ನು ತೋರಿಸಿಲ್ಲ. ಸಿಸಿಬಿ ಪೊಲೀಸರ ಕ್ರಮ ಕಾನೂನು ಬಾಹಿರವಾಗಿದೆ. ಹೀಗಾಗಿ ಕಾನೂನು ಬದ್ಧ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡದಂತೆ ಹಾಗೂ ಮಹಿಳೆಯರ ಕೆಲಸ ತಡೆಯದಂತೆ ಪೊಲೀಸರಿಗೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು.
ಶುಕ್ರವಾರ ಹೈಕೋರ್ಟ್ ನೀಡಿರುವ ಆದೇಶವನ್ನು ಪಾಲಿಸುತ್ತೇವೆ. ಆದರೆ, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ನಿಯಮಗಳನ್ನು ಉಲ್ಲಂ ಸಿ ಚಟುವಟಿಕೆಗಳು ನಡೆಯುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಪಾಲಿಸುತ್ತೇವೆ.-ಗಿರೀಶ್, ಸಿಸಿಬಿ ಡಿಸಿಪಿ