ಹುಬ್ಬಳ್ಳಿ: ‘ಎಚ್.ಡಿ. ರೇವಣ್ಣ ಮುಖ್ಯಮಂತ್ರಿಯಾಗಲಿ ಎಂದು ನಾನು ಹೇಳಿಲ್ಲ. ಮುಖ್ಯಮಂತ್ರಿ ರೇಸ್ನಲ್ಲಿ ಅವರು ಇದ್ದಾರೆಂದು ಹೇಳಿದ್ದು, ಇದನ್ನು ಅಪಾರ್ಥ ಮಾಡಿಕೊಳ್ಳುವುದು ಬೇಡ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ಅರ್ಹತೆ ಇದ್ದರೆ ಯಾರು ಬೇಕಾದರೂ ಮುಖ್ಯಮಂತ್ರಿಯಾಗಬಹುದು. ರೇವಣ್ಣ ಇಂದೇ ಮುಖ್ಯಮಂತ್ರಿಯಾಗಬೇಕು ಎಂದು ನಾನು ಹೇಳಿದ್ದೇನಾ? ನಮ್ಮ ವಿನಯ ಕುಲಕರ್ಣಿ ಅವರು ಯಾಕೆ ಮುಖ್ಯಮಂತ್ರಿಯಾಗಬಾರದು? ಕಾಲ ಕೂಡಿ ಬಂದರೆ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕಿಂತ ಹೆಚ್ಚಿನ ಸ್ಥಾನ ಅಲಂಕರಿಸುವ ಅರ್ಹತೆ ಹಾಗೂ ಸಾಮರ್ಥ್ಯವಿದೆ’ ಎಂದರು.
Advertisement