ಬೆಂಗಳೂರು: ಕೋವಿಡ್ ಸೋಂಕು ಆತಂಕದ ನಡುವೆ ಶಾಲೆ ಆರಂಭಿಸುವುದು ಸೂಕ್ತವಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶಾಲೆ,ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಕುರಿತಂತೆ ಪೋಷಕರಲ್ಲಿ ಆತಂಕವಿದೆ. ಮಕ್ಕಳ ಜೀವನದ ಜೊತೆ ಚೆಲ್ಲಾಟ ಬೇಡ. ಸರಕಾರ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಮುಗ್ಧ ರೈತರ ದಾರಿ ತಪ್ಪಿಸುವ ಕಾಂಗ್ರೆಸ್: ಕೃಷಿ ಕಾಯ್ದೆ ತಿದ್ದುಪಡಿ ಕುರಿತು ಜಾಗೃತಿ ಅಭಿಯಾನ
ಸದ್ಯಕ್ಕೆ ಶಾಲಾ-ಕಾಲೇಜುಗಳ ಆರಂಭ ಬೇಡ. ಸೂಕ್ತ ಸಿದ್ಧತೆ ಇಲ್ಲದೇ ಶಾಲಾಕಾಲೇಜು ಆರಂಭಿಸಬೇಡಿ ಎಂದು ಸಲಹೆ ನೀಡಿದರು.
ಅಕ್ಟೋಬರ್ 15ರ ನಂತರ ಶಾಲಾ ಕಾಲೇಜು ಆರಂಭಿಸಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆದರೆ ಇದಕ್ಕೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗಿದೆ. ಶಾಲಾ ಕಾಲೇಜು ಆರಂಭ ಕುರಿತಂತೆ ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆಗಳಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸರ್ಕಾರ ಸೂಚಿಸಿದೆ.