Advertisement

ಅನುದಾನಿತ ಪ್ರೌಢಶಾಲೆಗೆ ನೇಮಕಾತಿ ಮಾಡಿಕೊಳ್ಳಬೇಡಿ;ಮಾರ್ಗಸೂಚಿ/ಸುತ್ತೋಲೆ ಬಿಡುಗಡೆವರೆಗೆ ತಡೆ

11:42 PM Sep 08, 2024 | Team Udayavani |

ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ 2016ರ ಜನವರಿ ಒಂದರಿಂದ 2020ರ ಡಿಸೆಂಬರ್‌ 31ರ ವರೆಗಿನ ಅವಧಿಯಲ್ಲಿ ನಿವೃತ್ತಿ, ನಿಧನ ಮತ್ತು ರಾಜೀನಾಮೆಯಿಂದ ತೆರವಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ತತ್‌ಕ್ಷಣ ಕ್ರಮ ಕೈಗೊಳ್ಳದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಆಯುಕ್ತೆ ಬಿ. ಬಿ. ಕಾವೇರಿ ಅವರು ಜಿಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ 2016 -2020ರ ಅವಧಿಯಲ್ಲಿ ಖಾಲಿಯಾಗಿರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಆದರೆ, ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಾರ್ಗಸೂಚಿ ಅಥವಾ ಸುತ್ತೋಲೆ ಹೊರಡಿಸುವ ಮುಂಚಿತವಾಗಿಯೇ ಕೆಲವು ಜಿಲ್ಲೆಗಳ ಉಪನಿರ್ದೇಶಕರು ಹುದ್ದೆ ಭರ್ತಿ ಅನುಮತಿ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಶಾಲೆಗಳ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆಯುಕ್ತರು ಈ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾರ್ಗಸೂಚಿ ಅಥವಾ ಸುತ್ತೋಲೆ ಬಿಡುಗಡೆ ಮಾಡುವ ತನಕ ನೇಮಕಾತಿಗೆ ಕ್ರಮ ಕೈಗೊಳ್ಳಬಾರದು. ಒಂದು ವೇಳೆ ಆದೇಶ ಉಲ್ಲಂಘಿಸಿದರೆ ಸಂಬಂಧಿತ ಅಧಿಕಾರಿಯನ್ನೇ ಹೊಣೆ ಮಾಡ ಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next