Advertisement

ಮಕ್ಕಳ ವಸತಿ ಪ್ರವೇಶಕ್ಕೆ ನಿರ್ಬಂಧ ಬೇಡ

01:06 PM Sep 28, 2018 | |

ಯಾದಗಿರಿ: ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ವಸತಿ ನಿಲಯ ಪ್ರವೇಶದ ಕುರಿತು ಇತ್ತೀಚೆಗೆ ಹೊರಡಿಸಿರುವ ಸುತ್ತೋಲೆ ವಿರೋಧಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ವಸತಿ ನಿಲಯಗಳು ಬಡ ಮಕ್ಕಳಿಗೆ ಸಹಕಾರಿಯಾಗಿವೆ. ಹಾಸ್ಟೆಲ್‌ಗ‌ಳಲ್ಲಿದ್ದು ವ್ಯಾಸಾಂಗ ಮಾಡಿರುವ ಅನೇಕರು ಇವತ್ತು ಉನ್ನತ ಹುದ್ದೆಗಳಲಿದ್ದಾರೆ. ಬಡವರು, ದಲಿತ, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಹೀಗೆ ಎಲ್ಲಾ ವರ್ಗದ ಮಕ್ಕಳಿಗೆ ವಸತಿ ನಿಲಯ ಅನುಕೂಲ ಆಗಲಿದ್ದು, ಸರ್ಕಾರ ಹೊರಡಿಸಿರುವ ಸುತ್ತೋಲೆ, ದುರ್ಬಲ ಮಕ್ಕಳಿಗೆ ಶಿಕ್ಷಣದ ಬಾಗಿಲು ಮುಚ್ಚುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

ವಸತಿ ನಿಲಯಕ್ಕೆ ಪ್ರವೇಶ ಬಯಸಿ ಅರ್ಜಿ ಸಲ್ಲಿಸುವ ಎಲ್ಲರಿಗೂ ವಸತಿ ಸೌಕರ್ಯ ದೊರೆಯಬೇಕು. ದಲಿತ ವರ್ಗದ ವಿದ್ಯಾರ್ಥಿಗಳಿಗೆ ಮಾರಕ ಆಗಿರುವ ಸುತ್ತೋಲೆ ರದ್ದುಪಡಿಸಬೇಕು. ಭೂ ಒಡೆತನ ಯೋಜನೆ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಭೂಮಿ ಮಂಜೂರು ಮಾಡುವುದು, ಎಲ್ಲಾ ಯೋಜನೆ ಜಾರಿಗೊಳಿಸಲು ಏಕಗವಾಕ್ಷಿ ಯೋಜನೆ ಜಾರಿಗೊಳಿಸುವುದು, ಆಯಾ ಕ್ಷೇತ್ರದ ಶಾಸಕರ ನೇತೃತ್ವದ ಆಯ್ಕೆ ಸಮಿತಿ ರದ್ದುಗೊಳಿಸುವುದು, ಸಮಾಜ ಕಲ್ಯಾಣ ಇಲಾಖೆ ಅಧೀನದ ಎಲ್ಲಾ ನಿಗಮ ಮಂಡಳಿಗಳಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಎಲ್ಲರಿಗೂ ಸಾಲ ಸೌಲಭ್ಯ ದೊರಕಬೇಕು ಮತ್ತು ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಲಾಯಿತು.

ಚಂದ್ರಶೇಖರ ಬಾರಿಗಿಡಿ, ಅಪ್ಪಣ್ಣ ಗಾಯಕವಾಡ, ಶರಣಪ್ಪ ಬಾಗಣಗೇರಾ, ಗೋಲಾಪ ತಳವಾರ, ಬಸವರಾಜ ಚಿಂಚೋಳಿ, ಚನ್ನಪ್ಪ ಬಡಿಗೇರ ತೀರ್ಥ, ರಾಮಚಂದ್ರ ವಾಗಣಗೇರಾ, ಹೊನ್ನಪ್ಪ ರಸ್ತಾಪೂರ, ಬಸವರಾಜ ಕಕ್ಕೇರಾ, ಮರೆಪ್ಪ, ಶರಣು ಬಡಿಗೇರ, ಶಿವಶರಣಪ್ಪ ಯಾಳಗಿ, ಸಿದ್ಧಲಿಂಪ್ಪ ಹಳಿಸಗರ, ನಾಗಣ್ಣ ದೇಸಾಯಿ ಇದ್ದರು. 

Advertisement

Udayavani is now on Telegram. Click here to join our channel and stay updated with the latest news.

Next