Advertisement

ಪ್ರತ್ಯೇಕ ರಾಜ್ಯದ ಕೂಗು ಬೇಡ: ಸಚಿವ ರೆಡ್ಡಿ

07:00 AM Jul 08, 2018 | |

ಬೆಳಗಾವಿ: ಮಾಜಿ ಸಚಿವ ಎಚ್‌.ಕೆ. ಪಾಟೀಲ ಅವರು ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಏಕೆ ಹೇಳುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಅಂತ ದೊಡ್ಡವರ ಮಾತಿಗೆ ಪ್ರತಿಕ್ರಿಯಿಸುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದರು. 

Advertisement

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವರು ತಮ್ಮ ಸ್ವಾರ್ಥಕ್ಕಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದಾರೆ. ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ನೆಪ ಮಾಡಿ ಪ್ರತ್ಯೇಕ ರಾಜ್ಯ ಕೇಳುತ್ತಿರುವುದು ಸರಿಯಲ್ಲ. ಒಂದು ವೇಳೆ, ಬಜೆಟ್‌ನಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷಿಸಿದ್ದರೆ ಮುಂದಿನ ಬಜೆಟ್‌ನಲ್ಲಿ ಸೂಕ್ತ ಸೌಕರ್ಯ ಹಾಗೂ ಹೆಚ್ಚಿನ ಅನುದಾನ ನೀಡುವ ಬಗ್ಗೆ ಸರಕಾರ ಗಮನ ಹರಿಸಲಿದೆ. ಆದರೆ, ಬಜೆಟ್‌ನ ನೆಪ ಮಾಡಿ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿದೆ. ಸರಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next