ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು. ಕಾಂಗ್ರೆಸ್ ಶಾಸಕರನ್ನು ಆ ಪಕ್ಷದ ನಾಯಕರೇ ನಿಯಂತ್ರಿಸಬೇಕು. ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿಯವರ ವಿರುದ್ಧ ಬಹಿರಂಗವಾಗಿ ಕಾಂಗ್ರೆಸ್ ಶಾಸಕರು ಮಾತನಾಡಿದರೆ ನಾವು ಮಾತನಾಡಬೇಕಾಗುತ್ತದೆ ಎಂದು ಸಚಿವರು-ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಅದ್ಯಕ್ಷ ದಿನೇಶ್ ಗುಂಡೂರಾವ್ ಜತೆ ಈ ಕುರಿತು ನೀವೇ ಮಾತನಾಡಿ ಎಂದು ಸಭೆಯಲ್ಲಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಆಗ್ರಹಿಸಿದರು. ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ಮುಖ್ಯಮಂತ್ರಿಯವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದನ್ನೆಲ್ಲಾ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಮೈತ್ರಿ ಸರ್ಕಾರ ಇದ್ದಾಗ ಹೀಗೆಲ್ಲಾ ಮಾತನಾಡುವುದು ಸರಿಯಲ್ಲ . ನಮ್ಮ ಸಚಿವರ ಇಲಾಖೆಗೆ ಬರುವ ನಿಗಮ ಮಂಡಳಿಗೆ ಕಾಂಗ್ರೆಸ್ ಶಾಸಕರನ್ನು ನೇಮಿಸುವುದು ಎಷ್ಟು ಸರಿ ಎಂದು ಕಿಡಿಕಾರಿದರು .
ಆಕ್ಷೇಪ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ. ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಸಾ.ರಾ.ಮಹೇಶ್,
ನಿಗಮ ಮಂಡಳಿ, ಸಂಸದೀಯ ಕಾರ್ಯಗೊಂದಲ ನಿವಾರಣೆ ಹೊಣೆ ಮಾಜಿ ಸಿಎಂಗೆ ಸಮ್ಮಿಶ್ರ ಸರ್ಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉದ್ಭವಿಸಿರುವ ಗೊಂದಲ ನಿವಾರಣೆ ಮಾಡಲು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಜವಾಬ್ದಾರಿ ನೀಡಿದೆ. ಮಂಗಳವಾರ ನಡೆದ ಪಕ್ಷದ ಮುಖಂಡರು ಸಭೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ನಿಗಮ ಮಂಡಳಿ ನೇಮಕ ಮಾಡುವ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ತಿಕ್ಕಾಟ ಆರಂಭವಾಗಿದ್ದು, ಈ ಗೊಂದಲವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರೊಂದಿಗೆ ಚರ್ಚಿಸಿ ಬಗೆಹರಿಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಿದ್ದರಾಮಯ್ಯಗೆ ಸೂಚಿಸಿದ್ದಾರೆ. ಇದೇ ವಿಚಾರದ ಬಗ್ಗೆ ಸಿಎಂ ಅವರನ್ನು
ವೇಣುಗೋಪಾಲ್ ಭೇಟಿಯಾಗಲು ಪ್ರಯತ್ನಿಸಿದರೂ ಜೆಡಿಎಸ್ ಶಾಸಕಾಂಗ ಸಭೆ ಇದ್ದಿದ್ದರಿಂದ ಸಾಧ್ಯವಾಗಲಿಲ್ಲ.
ಜ.26-ಫೆ.15ರವರೆಗೆ ಕಾಂಗ್ರೆಸ್ ಅಭಿಯಾನ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಸಿದ್ಧತೆ ಆರಂಭಿಸಿದ್ದು, ಕೇಂದ್ರದ ವೈಫಲ್ಯಗಳನ್ನು ಜನರಿಗೆ ತಿಳಿಸಲು ಜ. 26 ರಿಂದ ಫೆ. 15ರವರೆಗೆ ಜನ ಸಂಪರ್ಕ ಅಭಿಯಾನ ಹಮ್ಮಿಕೊಂಡಿದೆ. ಸಾಂದರ್ಭಿಕ ಚಿತ್ರ ದರ್ಶಿ, ರಾಜಕೀಯ ಕಾರ್ಯದರ್ಶಿ, ಸಂಪುಟ ವಿಸ್ತರಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪ್ರಮುಖವಾಗಿ ಲೋಕಸಭೆ ಚುನಾವಣೆ ಸಿದ್ಧತೆ, ಹೆಚ್ಚು ಸ್ಥಾನ ಗೆಲ್ಲುವ ಬಗ್ಗೆ ಸಹ ಚರ್ಚೆ ನಡೆಸಲಾಯಿತು. ಲೋಕಸಭೆ ಚುನಾವಣೆ
ಕಾಂಗ್ರೆಸ್ ಜತೆಗೂಡಿ ಸ್ಪರ್ಧೆ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಮಟ್ಟದಲ್ಲಿ ಹಾಗೂ ರಾಜಕೀಯ ನೇಮ ಕಾತಿ, ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ನಿರ್ಧಾರದ ಅಧಿಕಾರ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು
ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಯವರಿಗೆ ಸಭೆ ನೀಡಿದೆ ಎಂದು ತಿಳಿಸಿದರು.
Related Articles
ಕಾರ್ಯದರ್ಶಿ, ನಾಲ್ಕು ಸಂಸದೀಯ ಕಾರ್ಯದರ್ಶಿ ಹಾಗೂ ಹತ್ತು ನಿಗಮ ಮಂಡಳಿ ಸ್ಥಾನಗಳ ಭರ್ತಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು ಇನ್ನೆರಡು ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪಟ್ಟಿ ಬಿಡುಗಡೆ
ಮಾಡಲಿದ್ದಾರೆ. 10 ನಿಗಮ ಮಂಡಳಿಗಳಲ್ಲಿ ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೂ ಅವಕಾಶ ಕೊಡಬೇಕು ಎಂಬ ಪ್ರಸ್ತಾಪಕ್ಕೆ ಶಾಸಕರ ವಿರೋಧ ವ್ಯಕ್ತವಾಗಿ ಅಂತಿಮವಾಗಿ ಇಬ್ಬರು ಸೋತ ಅಭ್ಯರ್ಥಿಗಳಿಗೆ ಹಾಗೂ ಉಳಿದ 8 ನಿಗಮಗಳಿಗೆ
ಶಾಸಕರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
Advertisement
ಗೊಂದಲ ನಿವಾರಣೆ ಹೊಣೆ ಮಾಜಿ ಸಿಎಂಗೆ ಸಮ್ಮಿಶ್ರ ಸರ್ಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಉದ್ಭವಿಸಿರುವ ಗೊಂದಲ ನಿವಾರಣೆ ಮಾಡಲು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಜವಾಬ್ದಾರಿ ನೀಡಿದೆ. ಮಂಗಳವಾರ ನಡೆದ ಪಕ್ಷದ ಮುಖಂಡರು ಸಭೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ನಿಗಮ ಮಂಡಳಿ ನೇಮಕ ಮಾಡುವ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ
ತಿಕ್ಕಾಟ ಆರಂಭವಾಗಿದ್ದು, ಈ ಗೊಂದಲವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ
ದೇವೇಗೌಡ ಅವರೊಂದಿಗೆ ಚರ್ಚಿಸಿ ಬಗೆಹರಿಸುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಿದ್ದರಾಮಯ್ಯಗೆ ಸೂಚಿಸಿದ್ದಾರೆ. ಇದೇ ವಿಚಾರದ ಬಗ್ಗೆ ಸಿಎಂ ಅವರನ್ನು ವೇಣುಗೋಪಾಲ್ ಭೇಟಿಯಾಗಲು ಪ್ರಯತ್ನಿಸಿದರೂ ಜೆಡಿಎಸ್ ಶಾಸಕಾಂಗ
ಸಭೆ ಇದ್ದಿದ್ದರಿಂದ ಸಾಧ್ಯವಾಗಲಿಲ್ಲ. ಜ.26-ಫೆ.15ರವರೆಗೆ ಕಾಂಗ್ರೆಸ್ ಅಭಿಯಾನ
ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಸಿದ್ಧತೆ ಆರಂಭಿಸಿದ್ದು, ಕೇಂದ್ರದ ವೈಫಲ್ಯಗಳನ್ನು ಜನರಿಗೆ ತಿಳಿಸಲು ಜ. 26 ರಿಂದ
ಫೆ. 15ರವರೆಗೆ ಜನ ಸಂಪರ್ಕ ಅಭಿಯಾನ ಹಮ್ಮಿಕೊಂಡಿದೆ.