ನವದೆಹಲಿ: ಒಂದು ವೇಳೆ ನೀವು ಭಾರತೀಯ ವಿದ್ಯಾರ್ಥಿಯಾಗಿದ್ದರೆ ದೇಶದಲ್ಲಿಯೇ ವಾಸ್ತವ್ಯ ಹೂಡಿ ಅಥವಾ ವಿದೇಶಕ್ಕೆ ಹೋಗಿ ನೆಲೆಸಿ. ಆದರೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಪಾಕಿಸ್ತಾನಕ್ಕೆ ತೆರಳಬೇಡಿ ಎಂದು ಯುಜಿಸಿ (ಯೂನಿರ್ವಸಿಟಿ ಗ್ರ್ಯಾಂಟ್ ಕಮಿಷನ್) ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್ ಜಂಟಿಯಾಗಿ ಭಾರತೀಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ನೋ ಬಾಲ್ ವಿವಾದ: ರಿಷಭ್ ಪಂತ್, ಶಾರ್ದೂಲ್ ಠಾಕೂರ್, ಕೋಚ್ ಆಮ್ರೆಗೆ ಭಾರೀ ದಂಡ!
ಉನ್ನತ ವ್ಯಾಸಂಗಕ್ಕಾಗಿ ಪಾಕಿಸ್ತಾನಕ್ಕೆ ತೆರಳಬೇಡಿ ಎಂಬ ಸಲಹೆಯನ್ನು ನೀಡಿದೆ. ಪಾಕಿಸ್ತಾನದಲ್ಲಿ ಪದವಿ ಅಥವಾ ಉನ್ನತ ಶಿಕ್ಷಣ ಪಡೆದವರು ಭಾರತದಲ್ಲಿ ಉದ್ಯೋಗ ಅಥವಾ ಉನ್ನತ ವಿದ್ಯಾಭ್ಯಾಸಕ್ಕೆ ಅರ್ಹರಾಗಿರುವುದಿಲ್ಲ ಎಂದು ಯುಜಿಸಿ ಮತ್ತು ಎಐಸಿಟಿಇ ಜಂಟಿ ಹೇಳಿಕೆಯಲ್ಲಿ ವಿವರಿಸಿದೆ.
ಏತನ್ಮಧ್ಯೆ ಭಾರತೀಯ ಪೌರತ್ವ ಪಡೆದ ಪಾಕಿಸ್ತಾನಿ ವಲಸಿಗರಿಗೆ ಇದರಿಂದ ವಿನಾಯ್ತಿ ನೀಡಲಾಗಿದೆ. ಕಾಳಜಿಯ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಪಡೆಯಲು ಪಾಕಿಸ್ತಾನಕ್ಕೆ ಹೋಗದಿರುವಂತೆ ಸಲಹೆ ನೀಡಲಾಗಿದೆ.
ವಿದೇಶದಲ್ಲಿರುವ ಭಾರತೀಯ ಪ್ರಜೆಗಳು ಪಾಕಿಸ್ತಾನದ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪಡೆದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಉದ್ಯೋಗ ಮತ್ತು ಉನ್ನತ ವ್ಯಾಸಂಗಕ್ಕೆ ಅರ್ಹರಾಗಿರುವುದಿಲ್ಲ ಎಂದು ನೋಟಿಫಿಕೇಶನ್ ನಲ್ಲಿ ತಿಳಿಸಿದೆ.