Advertisement

University ಪ್ರಮಾಣ ಪತ್ರದಲ್ಲಿ ಆಧಾರ್‌ ಸಂಖ್ಯೆ ಬಳಸಬೇಡಿ

12:16 AM Sep 03, 2023 | Team Udayavani |

ಹೊಸದಿಲ್ಲಿ: ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ನೀಡುವ ಪದವಿ ಮತ್ತು ತಾತ್ಕಾಲಿಕ ಪ್ರಮಾಣ ಪತ್ರಗಳಲ್ಲಿ ವಿದ್ಯಾರ್ಥಿಗಳ ಆಧಾರ್‌ ಸಂಖ್ಯೆಯನ್ನು ನಮೂದಿಸಕೂಡದು ಎಂದು ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (ಯುಜಿಸಿ) ವಿವಿಗಳಿಗೆ ಸೂಚನೆ ನೀಡಿದೆ.

Advertisement

ವಿವಿಗಳು ಪ್ರಮಾಣ ಪತ್ರ ಕೊಡಮಾಡು ವಾಗಲೇ ಅದರಲ್ಲಿ ವಿದ್ಯಾರ್ಥಿಗಳ ಸಂಪೂರ್ಣ ಆಧಾರ್‌ ಸಂಖ್ಯೆಯನ್ನು ನಮೂದಿ ಸಿದರೆ, ಭವಿಷ್ಯದಲ್ಲಿ ಉದ್ಯೋಗ ನೇಮಕಾತಿ ಸಂದರ್ಭಗಳಲ್ಲಿ ದಾಖಲಾತಿ ಪರಿಶೀಲನೆ ಮಾಡಲು ಸಹಾಯವಾಗುತ್ತದೆ ಎನ್ನುವ ನಿಟ್ಟಿನಲ್ಲಿ ವಿ.ವಿ.ಗಳಿಗೆ ನಿರ್ದೇಶನ ನೀಡಲು ಹಲವು ರಾಜ್ಯಸರಕಾರಗಳು ಪ್ರಸ್ತಾವಿಸುತ್ತಿರುವುದು ವರದಿಯಾಗಿತ್ತು.

ಈ ಹಿನ್ನೆಲೆಯಲ್ಲಿ ನಿಯಮಗಳ ಪ್ರಕಾರ ಆಧಾರ್‌ ಸಂಖ್ಯೆಯನ್ನು ಒಳಗೊಂಡಿರುವ ಯಾವುದೇ ದಾಖಲಾತಿಯನ್ನು ಬಹಿರಂಗ ಪಡಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆಧಾರ್‌ ಸಂಖ್ಯೆಯನ್ನು ಪ್ರಮಾಣ ಪತ್ರದಲ್ಲಿ ನಮೂದಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಯುಜಿಸಿ ಕಾರ್ಯದರ್ಶಿ ಮನೀಷ್‌ ಜೋಶಿ ಸ್ಪಷ್ಟ ಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next