Advertisement
ನಗರದ ಹುಳಿಯಾರ್ ರಸ್ತೆ ಹಾಗೂ ಮಟನ್ ಮಾರ್ಕೆಟ್ ರಸ್ತೆಯಲ್ಲಿರುವ ಮಾವಿನಹಣ್ಣುಗಳ ಸಗಟು ಮಾರಾಟ ಮಳಿಗೆಗಳಿಗೆ ತಹಶೀಲ್ದಾರ್ ಸಂತೋಷಕುಮಾರ್ ಮತ್ತು ತಾಲೂಕು ಆಹಾರ ಸುರಕ್ಷತಾಧಿಕಾರಿಗಳಾದ ಡಾ.ಜಿ.ಎಸ್ ನಾಗಪ್ಪ ಮತ್ತು ತಂಡದೊಂದಿಗೆ ದಿಢೀರ್ ಭೇಟಿ ನೀಡಿ ಕೃತಕವಾಗಿ ವಿಷಕಾರಿ ರಾಸಾಯನಿಕ ವಸ್ತುಗಳನ್ನು ಬಳಕೆ ಮಾಡಿ ಮಾವಿನ ಕಾಯಿಗಳನ್ನು ಕೃತಕವಾಗಿ ಹಣ್ಣುಗಳನ್ನು ಮಾಡಲಾಗುತ್ತಿದೆಯೇ ಎಂದು ಪರಿಶೀಲನೆ ನಡೆಸಿದರು.
Related Articles
Advertisement
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್ ಮಾತನಾಡಿ, ಬೇಸಿಗೆ ಕಾಲದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚು ಹರಡುವ ಸಾಧ್ಯತೆ ಇದ್ದು, ವಿಷಪೂರಿತ ರಾಸಾಯನಿಕ ಬಳಸಿ ಮಾವಿನ ಹಣ್ಣು ಮಾಡುವುದು ಅಪರಾದವಾಗಿದ್ದು, ವ್ಯಕ್ತಿಯ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುವ ಕೃತಕ ಹಣ್ಣುಗಳ ತಯಾರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ತಾಲೂಕು ಆಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡದೊಂದಿಗೆ ಪರಿಶೀಲನೆ ನಡೆಸುತ್ತಿದೆ. ಮಾವಿನ ಹಣ್ಣುಗಳ ಸಾಂಪಲ್ ಪಡೆದಿದ್ದು, ಇದನ್ನು ರಾಸಾಯನಿಕ ಪರೀಕ್ಷೆಗೆ ಕಳುಹಿಸಲಾಗುತ್ತದೆ. ರಾಸಾಯನಿಕ ವಸ್ತುಗಳನ್ನು ಬಳಸಿ ಕೃತಕವಾಗಿ ಹಣ್ಣುಗಳನ್ನು ಮಾಡಿದ್ದರೆ ಅಂತಹವರ ಮೇಲೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು. ಪರಿಶೀಲನಾ ತಂಡದಲ್ಲಿ ಕಂದಾಯ ಇಲಾಖೆಯ ಅಧಿಕಾರಿ ಮಂಜುನಾಥ್ , ಆರೋಗ್ಯ ಇಲಾಖೆ ನಿರೀಕ್ಷಕರಾದ ಜಬ್ಬೀರ್ ಪಾಷಾ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.