Advertisement

ಕೆಪಿಸಿಸಿ ಅಧ್ಯಕ್ಷ ಸ್ಥಾನ ಈಗ ಬೇಡ: ಸತೀಶ ಜಾರಕಿಹೊಳಿ

06:05 AM Jun 24, 2018 | |

ಬೆಳಗಾವಿ: ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸುವ ಅವಕಾಶ ಇತ್ತು. ಆದರೆ ಈಗ ಬೇಡ. ಮುಂದೆ ನೋಡೋಣ ಎಂದು ಹೇಳಿದ್ದೇನೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಯಾರೇ ನೇಮಕವಾದರೂ ಅವರಿಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ. ಪಕ್ಷ ಸಂಘಟನೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಹುದ್ದೆಯಿಂದಲೇ ಪಕ್ಷ ಸಂಘಟನೆ ಮಾಡಬೇಕೆನ್ನುವ ಅವಶ್ಯಕತೆ ಇಲ್ಲ. ರಾಜ್ಯದಲ್ಲಿ ತಮ್ಮನ್ನು ಸತೀಶ ಜಾರಕಿಹೊಳಿ ಎಂದು ಜನ ಗುರುತಿಸುತ್ತಿದ್ದಾರೆ. ಜನರ ನಂಬಿಕೆಯ ಮೇಲೆಯೇ ಪಕ್ಷ ಕಟ್ಟುತ್ತಿದ್ದೇನೆ ಎಂದು ಹೇಳಿದರು.

ಸಮ್ಮಿಶ್ರ ಸರಕಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಅಭಿಪ್ರಾಯ ಎಲ್ಲರಲ್ಲಿದೆ. ಈ ಭಾಗದಲ್ಲಿ ಕಾಂಗ್ರೆಸ್‌ನ 40 ಜನ ಶಾಸಕರಿದ್ದರೂ ಕೇವಲ ನಾಲ್ವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಈಗ ಆಗಿರುವ ಅನ್ಯಾಯವನ್ನು ಪಕ್ಷದ ವರಿಷ್ಠರು ಕೂಡಲೇ ಸರಿಪಡಿಸಿ, ಮುಂಬೈ ಕರ್ನಾಟಕ ಹಾಗೂ ಹೈದರಾಬಾದ್‌ ಕರ್ನಾಟಕಕ್ಕೆ ಸಮಾನ ಅವಕಾಶ ನೀಡಬೇಕು. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದ್ದರೂ ಪ್ರತ್ಯೇಕ ರಾಜ್ಯ ಬೇಡಿಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಮಲ್ಲಿಕಾರ್ಜುನ ಖರ್ಗೆ ರೀತಿ ಬೇರೆಯವರು ಬೆಳೆದರೆ ಉತ್ತರ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡಬಹುದು ಎಂದರು. 

ನಿಗಮ ಮಂಡಳಿ ನೇಮಕ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ತಮ್ಮ ಬೆಂಬಲಿಗರ ಪಟ್ಟಿ ಸಿದ್ಧಪಡಿಸಿ ರಾಜ್ಯದ ಉಸ್ತುವಾರಿ ವೇಣುಗೋಪಾಲ ಅವರಿಗೆ ಕೊಡಲಾಗುವುದು. ಸಾಧ್ಯವಾದಷ್ಟು ಜನರಿಗೆ ಅವಕಾಶ  ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next