Advertisement

ಅಧಿಕಾರಕ್ಕೆ ವಾಮಮಾರ್ಗ ಬೇಡ 

06:00 AM Sep 25, 2018 | Team Udayavani |

ಬೆಳಗಾವಿ: “ವಾಮಮಾರ್ಗದಿಂದ ಅಧಿಕಾರ ಹಿಡಿಯುವ ಕನಸು ಬಿಟ್ಟು ಬಿಜೆಪಿ ವಿರೋಧ ಪಕ್ಷ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸಲಿ’ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌. ಪುಟ್ಟರಾಜು ಕಿವಿಮಾತು ಹೇಳಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿರೋಧ ಪಕ್ಷದಲ್ಲಿ ಕುಳಿತು ಜವಾಬ್ದಾರಿಯಿಂದ ಕೆಲಸ ಮಾಡಲಿ ಎಂದು ರಾಜ್ಯದ ಜನ ಬಿಜೆಪಿಗೆ 104 ಸ್ಥಾನಗಳನ್ನು ನೀಡಿದ್ದಾರೆ. ಹೀಗಿರುವಾಗ ಹೇಗಾದರೂ ಮಾಡಿ ಸಿಎಂ ಕುರ್ಚಿ ಎಳೆದುಕೊಳ್ಳಬೇಕು ಎನ್ನುವ ದುರಾಸೆ ಕೈಬಿಡಬೇಕು’ ಎಂದು ಯಡಿಯೂರಪ್ಪ ಅವರಿಗೆ ಟಾಂಗ್‌ ನೀಡಿದರು. ಸಮ್ಮಿಶ್ರ ಸರಕಾರ ಅಭದ್ರಗೊಳಿಸುವ ಉದ್ದೇಶದಿಂದ ಬಿಜೆಪಿ ನಾಯಕರು ನಮ್ಮ ಶಾಸಕರಿಗೆ ಕೋಟ್ಯಂತರ ರೂ. ಹಣದ ಆಮಿಷ ಒಡ್ಡಿದ್ದಾರೆ. ಇದಕ್ಕಾಗಿ ಯಾವ ಶಾಸಕರ ಜತೆ ಮಾತನಾಡಿದ್ದಾರೆಂಬ ದಾಖಲೆಗಳು ನಮ್ಮ ಬಳಿ ಇವೆ. ಇದನ್ನು ಸೂಕ್ತ ಸಮಯದಲ್ಲಿ ಬಹಿರಂಗಪಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿಯವರು ಕೆಲ ಮಾಧ್ಯಮಗಳನ್ನು ಖರೀದಿ ಮಾಡಿ ಸಮ್ಮಿಶ್ರ ಸರಕಾರ ಪತನವಾಗುತ್ತದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಸರಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ. ರೈತರಸಾಲ ಮನ್ನಾ ಮಾಡಿ ಐತಿಹಾಸಿಕ ದಾಖಲೆ ಮಾಡಿದೆ. ಅದೇ ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ. ಬಿಜೆಪಿಯವರಿಗೆ ನಮ್ಮ ಕೆಲಸ ನೋಡಿ ಹೊಟ್ಟೆ ಉರಿ ಹೆಚ್ಚಾಗಿದೆ. ಅದನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಸರಕಾರ ಉರುಳುತ್ತದೆ ಎಂಬ ಮಾತು ಆಡುತ್ತಿದ್ದಾರೆ ಎಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next