Advertisement

ಕುಮಾರಸ್ವಾಮಿಗೆ ಆತಂಕಬೇಡ: ಪರಮೇಶ್ವರ್‌

06:10 AM Jun 05, 2018 | Team Udayavani |

ಬೆಂಗಳೂರು:ಸಮ್ಮಿಶ್ರ ಸರ್ಕಾರದಲ್ಲಿ ಐದು ವರ್ಷ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿರುತ್ತಾರೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಪುನರುಚ್ಚರಿಸಿದ್ದಾರೆ.

Advertisement

ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆ ಕುರಿತು ನಗರದ ಶಾಸಕರು ಮತ್ತು ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಅವರು, ಕಾಂಗ್ರೆಸ್‌ ಹೈ ಕಮಾಂಡ್‌ ಈಗಾಗಲೇ ಸ್ಪಷ್ಟಪಡಿಸಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ. ನಾವು ಐದು ವರ್ಷ ಅಧಿಕಾರ ಪೂರ್ಣಗೊಳಿಸುತ್ತೇವೆ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಹೇಳಿದರು.

ಇದೇ ವೇಳೆ, ಖಾತೆ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿಯೂ ಅಸಮಾಧಾನ ಇಲ್ಲ. ರಾಹುಲ್‌ ಗಾಂಧಿ ವಿದೇಶದಿಂದ ಬಂದ ತಕ್ಷಣ ದೆಹಲಿಗೆ ತೆರಳಿ ಅವರೊಂದಿಗೆ ಚರ್ಚಿಸುತ್ತೇವೆ. ನೂತನ ಸಚಿವರು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್‌.ಪಾಟೀಲ್‌ ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆಯೋ ಗೊತ್ತಿಲ್ಲ. ಕೆಲವರು ಬಾಗಲಕೋಟೆಯ ಅವರ ನಿವಾಸದ ಎದುರು ಪ್ರತಿಭಟನೆ ಮಾಡಿದ್ದರು. ಅದರಿಂದ ಅವರಿಗೆ ಬೇಸರ ಆಗಿರಬಹುದು. ಈ ಬಗ್ಗೆ ಅವರ ಬಳಿ ಮಾತನಾಡುತ್ತೇನೆ. ಅವರಿಗೆ ಬೇಸರವಾಗಿದ್ದರೆ ಸಮಾಧಾನ ಪಡಿಸುತ್ತೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next