Advertisement

ರಕ್ಷಣಾ ಕರ್ತವ್ಯ ನಿಷ್ಠೆಯಿಂದ ಮಾಡಿ

12:19 PM Dec 11, 2017 | Team Udayavani |

ಬೀದರ: ಪ್ರತಿಯೊಬ್ಬರು ಕಾನೂನು ನಿಯಮಗಳನ್ನು ಪಾಲಿಸಬೇಕು. ರಕ್ಷಣೆಯ ಕರ್ತವ್ಯವನ್ನು ನಿಷ್ಠೆ, ಪ್ರಾಮಾಣಿಕವಾಗಿ ಮಾಡಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಶ್ರೀಹರಿ ಬಾಬು ಕರೆ ನೀಡಿದರು.

Advertisement

ನಗರದ ಜಿಲ್ಲಾ ಗೃಹರಕ್ಷದ ದಳ ಕಚೇರಿ ಆವರಣದಲ್ಲಿ ಗೃಹ ರಕ್ಷಕ ದಳ ದಿನಾಚರಣೆ ನಿಮಿತ್ತ ನಡೆದ ಮೆರವಣಿಗೆ ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಸಂಚಾರ ನಿಯಂತ್ರಣ ಮಾಡುವಲ್ಲಿ ಪೊಲೀಸರೊಂದಿಗೆ ಗೃಹ ರಕ್ಷಕ ಸಿಬ್ಬಂದಿ ಕೈ ಜೋಡಿಸಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. 

ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಠ ಮನೋಜಕುಮಾರ ಪಾಟೀಲ ಮಾತನಾಡಿ, ಪ್ರತಿಯೊಬ್ಬರ ರಕ್ಷಣೆ, ಕಾನೂನು ಪರಿಪಾಲನೆ ಮಾಡುವುದು, ರಸ್ತೆ ಸುರಕ್ಷತೆ ನಿಯಮ ಪಾಲಿಸುವಂತೆ ಅರಿವು ಮೂಡಿಸುವುದು, ಅಪಘಾತ ತಡೆಗಟ್ಟಲು ಸೂಕ್ತ ಮಾಹಿತಿ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಗೃಹ ರಕ್ಷಕ ದಳ ಕಚೇರಿಯಿಂದ ಶುರುವಾದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುನಃ ಕಚೇರಿಗೆ ತಲುಪಿ ಮುಕ್ತಾಯಗೊಂಡಿತು. 250 ಗೃಹ ರಕ್ಷಕರು, ಪೊಲೀಸರು ಮತ್ತು ಗಣ್ಯರು ಭಾಗವಹಿಸಿದ್ದರು. ಈ ವೇಳೆ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೊಗಲಪ್ಪ ಅವರನ್ನು ಸನ್ಮಾನಿಸಲಾಯಿತು. ಸಂಚಾರಿ ಪೊಲೀಸ್‌ ಠಾಣೆಯ ಸಿಪಿಐ ಶ್ರೀಕಾಂತ ಅಲ್ಲಾಪುರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next