Advertisement

ಅರ್ಹ ಫ‌ಲಾನುಭವಿಗಳಿಗೆ ವಂಚನೆ ಮಾಡದಿರಿ

12:33 PM Feb 27, 2017 | Team Udayavani |

ಕೆ.ಆರ್‌.ನಗರ: ಗ್ರಾಮ ಪಂಚಾಯಿತಿಯ ಚುನಾಯಿತ ಸದಸ್ಯರು ಮತ್ತು ಅಧಿಕಾರಿಗಳು ಸರ್ಕಾರದ ವಸತಿ ಯೋಜನೆಯಡಿಯ ಮನೆಗಳನ್ನು ವಿತರಿಸುವಾಗ ಯಾವುದೇ ಕಾರಣಕ್ಕೂ ಅರ್ಹ ಫ‌ಲಾನುಭವಿಗಳಿಗೆ ವಂಚನೆ ಮಾಡಬಾರದು ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು.

Advertisement

ಪಟ್ಟಣದ ಎಚ್‌.ಡಿ. ದೇವೇಗೌಡ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸದಸ್ಯರು ಹಣದ ಆಸೆಗೆ ಮತ್ತು ಸಂಬಂಧಿಕರಿಗೆ ಮನೆಗಳನ್ನು ನೀಡುವ ಪ್ರವೃತ್ತಿಯನ್ನು ಬಿಟ್ಟು, ಅರ್ಹರಿಗೆ ವಿತರಿಸಬೇಕು. ಆಗ ಮಾತ್ರ ಸರ್ಕಾರದ ಯೋಜನೆ ಯಶಸ್ವಿಗೊಳ್ಳಲು ಸಾಧ್ಯ ಎಂದು ತಿಳಿಸಿದರು.

ತಾಲೂಕಿನ 34 ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ 1435 ಮನೆಗಳು ವಿವಿಧ ವಸತಿ ಯೋಜನೆಯಡಿ ಮಂಜೂರಾಗಿದ್ದು ಅವುಗಳಲ್ಲಿ ಸಾಮಾನ್ಯ ವರ್ಗಕ್ಕೆ 796, ಪರಿಶಿಷ್ಟ ಜಾತಿಗೆ 379, ಪರಿಶಿಷ್ಟ ಪಂಗಡದವರಿಗೆ 101 ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ 159 ಮನೆಗಳನ್ನು ಮೀಸಲಾಗಿದ್ದು ಅವುಗಳನ್ನು ಅರ್ಹರಿಗೆ ಸಮರ್ಪಕವಾಗಿ ವಿತರಿಸಿ ವರದಿ ನೀಡಬೇಕೆಂದು ಸೂಚಿಸಿದರು.

ಅನರ್ಹರಿಗೆ ಮನೆ ವಿತರಣೆಯಾದರೆ ಆ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳನ್ನೆ ಹೊಣೆಗಾರರನ್ನಾಗಿ ಮಾಡಲಿದ್ದು, ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುತ್ತದೆ. ಇದಕ್ಕೆ ಅಧಿಕಾರಿಗಳು ಅವಕಾಶ ಮಾಡಿಕೊಡದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಬಹಳಷ್ಟು ಮಂದಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಈಗ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ವಿತರಣೆ ಮಾಡಿರುವ ಮನೆಗಳ ಸಂಖ್ಯೆ ಕಡಿಮೆಯಾಗಿದ್ದು ಫ‌ಲಾನುಭವಿಗಳು ಹೆಚ್ಚಾಗಿದ್ದಾರೆ. ಹಾಗಾಗಿ ಮತ್ತಷ್ಟು ಹೆಚ್ಚುವರಿ ಮನೆಗಳನ್ನು ನೀಡಬೇಕೆಂದು ಮನವಿ ಮಾಡಿದಾಗ ಇದಕ್ಕೆ ಸ್ಪಂದಿಸಿದ ಶಾಸಕರು ಈಗ ನಿಗದಿ ಪಡಿಸಿರುವ ಗುರಿಯನ್ನು ಯಶಸ್ವಿಯಾಗಿ ಪೂರೈಸಿ ಮತ್ತೆ ಅಗತ್ಯವಿರುವಷ್ಟು ಮನೆಗಳನ್ನು ಸರ್ಕಾರದಿಂದ ಮಂಜೂರು ಮಾಡಿಸುತ್ತೇನೆ ಎಂದು ಭರವಸೆ ನೀಡಿದರು.

Advertisement

ತಾಪಂ ಸದಸ್ಯರಾದ ಶೋಭಾ, ಬಿ.ಎಂ.ಮಹದೇವ್‌, ಶ್ರೀನಿವಾಸ ಪ್ರಸಾದ್‌, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಂ.ಎಸ್‌.ಹರಿಚಿದಂಬರ, ಎಪಿಎಂಸಿ ನಿರ್ದೇಶಕರಾದ ಹಿರಣಯ್ಯ, ಕುಪ್ಪಳ್ಳಿ ಸೋಮು, ಇಒ ಸಿ.ಚಂದ್ರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next