ಚಿಕ್ಕಮಗಳೂರು: ಚುನಾಯಿತ ಪ್ರತಿನಿ ಧಿಗಳು ತಮ್ಮ ಜವಾಬ್ದಾರಿ ಅರಿತು ಮತ ಚಲಾಯಿಸಬೇಕು ಎಂದು ಮಾಜಿ ಸಚಿವ ಹಾಗೂ ಚಿಕ್ಕಮಗಳೂರು ಕಾಂಗ್ರೆಸ್ ವಿಧಾನ ಪರಿಷತ್ ಚುನಾವಣೆ ಉಸ್ತುವಾರಿ ಸಗೀರ್ ಅಹಮದ್ ಕರೆ ನೀಡಿದರು.
ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಕುರುವಂಗಿ ಮತ್ತು ಜಾಗರ ಜಿಲ್ಲಾ ಪಂಚಾಯತ್ ಕ್ಷೇತ್ರದ ಚುನಾಯಿತ ಜನಪ್ರತಿನಿಧಿ ಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಳೆದ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಸಿದ್ದ ಎಂ.ಕೆ.ಪ್ರಾಣೇಶ್ ಅವರ ಮುಖ ನೋಡಿದ್ದೀರಾ ಎಂದು ಗ್ರಾಪಂ ಸದಸ್ಯರಿಗೆ ಕೇಳಿದರೆ ಪತ್ರಿಕೆಗಳಲ್ಲಿ ಮಾತ್ರ ನೋಡಿದ್ದೇವೆ ಎಂದು ಉತ್ತರಿಸುತ್ತಾರೆ ಎಂದರು.
ಗಾಯತ್ರಿ ಶಾಂತೇಗೌಡ ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದಾಗ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಸಮಸ್ಯೆಗೆ ಕೂಡಲೇ ಸ್ಪಂದಿಸುವ ಕೆಲಸ ಮಾಡುತ್ತಿದ್ದರು. ಜಾತಿ, ಪಕ್ಷಬೇಧ ಮರೆತು ಎಲ್ಲಾರ ಸಮಸ್ಯೆಗಳಿಗೆ ಸ ಂದಿಸಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ| ಡಿ.ಎಲ್. ವಿಜಯಕುಮಾರ್ ಮಾತನಾಡಿ, ಜನಪ್ರತಿನಿ ಧಿಗಳು ತಮ್ಮ ಅಧಿ ಕಾರ, ಜವಾಬ್ದಾರಿ ಅರಿತುಕೊಳ್ಳಬೇಕು. ಆಸೆ- ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಬೇಕು ಎಂದರು. ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಎಲ್. ಮೂರ್ತಿ ಮಾತನಾಡಿ, ಜನಪ್ರತಿನಿಧಿಗಳು ವಿಧಾನ ಪರಿಷತ್ ಚುನಾವಣೆಯಲ್ಲಿ ಬದಲಾವಣೆ ಬಯಸಿದ್ದಾರೆ. ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸವನ್ನು ಜನಪ್ರತಿನಿಧಿಗಳು ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಮಾಡಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ತಮ್ಮ ಅಧಿಕಾರ ಅವಧಿಯಲ್ಲಿ ಹುಲಿಯೋಜನೆ, ಒತ್ತುವರಿ ಸಮಸ್ಯೆ ಸೇರಿದಂತೆ ಅತಿವೃಷ್ಠಿ ಸಂದರ್ಭದಲ್ಲಿ ಚಕಾರವೆತ್ತದವರು. ಚುನಾವಣೆ ಘೋಷಣೆಯಾದ ಬಳಿಕ ಗ್ರಾಪಂ ಸದಸ್ಯರ ಗೌರವಧನ ಹೆಚ್ಚಿಸಬೇಕೆಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ತಿಳಿಸಿದರು.
ಕೆಪಿಸಿಸಿ ವಕ್ತಾರ ಬಿ.ಎಲ್.ಶಂಕರ್, ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ, ಜಿಪಂ ಮಾಜಿ ಅಧ್ಯಕ್ಷ ಎ.ಎನ್. ಮಹೇಶ್, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್ ನಾಯ್ಡು, ಸಿ. ಎನ್.ಅಕ್ಮಲ್, ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ ಇದ್ದರು.