Advertisement

“2.0′ಚಿತ್ರದ ಆ್ಯಕ್ಷನ್ ಹೇಗಿದೆ ಗೊತ್ತಾ?: Watch

03:34 PM Oct 03, 2018 | Team Udayavani |

ಸೂಪರ್​ ಸ್ಟಾರ್​ ರಜನಿಕಾಂತ್​ ಹಾಗೂ ಬಾಲಿವುಡ್​ನ ಅಕ್ಷಯ್​ ಕುಮಾರ್​ ನಟಿಸಿರುವ “2.0′ ಚಿತ್ರ ಒಂದಲ್ಲ ಒಂದು ವಿಷಯದಲ್ಲಿ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಗೊಂಡ ಚಿತ್ರದ ಟೀಸರ್​ ಕೋಟಿಗಟ್ಟಲೆ ವೀಕ್ಷಣೆ ಕಂಡು ಸುದ್ದಿಯಾಗಿತ್ತು. ಇದೀಗ ಚಿತ್ರದ ಮೇಕಿಂಗ್​ ವಿಡಿಯೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಟೀಸರ್​ನಷ್ಟೇ ಸದ್ದು ಮಾಡುತ್ತಿದೆ.

Advertisement

ಮೇಕಿಂಗ್​​ ವಿಡಿಯೋದಲ್ಲಿ ರಜನಿ ಮತ್ತು ಅಕ್ಷಯ್​ರ ಹಲವು ಸಾಹಸಗಳು, ವಿವಿಧ ಸ್ಟೈಲಿಶ್​ ಲುಕ್​ಗಳನ್ನು ಕಾಣಬಹುದಾಗಿದೆ. ಪ್ರಪಂಚದಾದ್ಯಂತ ಸುಮಾರು 25 ವಿಎಫ್​ಎಕ್ಸ್​ ಸ್ಟುಡಿಯೋದಲ್ಲಿ ಚಿತ್ರಕ್ಕೆ ಗ್ರಾಫಿಕ್​ ಕಾರ್ಯ ಮಾಡಲಾಗಿದ್ದು, ಸುಮಾರು 3000ಕ್ಕೂ ಹೆಚ್ಚು ನುರಿತ ತಂತ್ರಜ್ಞರು ಚಿತ್ರಕ್ಕೆ ಕಾರ್ಯನಿರ್ವಹಿಸಿದ್ದಾರಂತೆ. ಈ ಹಿಂದೆ ಎಂದಿರನ್(ರೋಬೊಟ್) ಚಿತ್ರ ನಿರ್ದೇಶಿಸಿ ಹಾಲಿವುಡ್ ಮಟ್ಟದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಶಂಕರ್ ಅವರೇ ಚಿತ್ರದ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದಾರೆ.

ಹೀಗಾಗಿ ಸಿನಿಪ್ರಿಯರಲ್ಲಿ ಈ ಚಿತ್ರ ಮತ್ತಷ್ಟು ಕುತೂಹಲ ಮೂಡಿಸಿದೆ. ಬಾಲಿವುಡ್ ನಟ ಅಕ್ಷಯ್​ ಕುಮಾರ್​ ಈ ಚಿತ್ರದಲ್ಲಿ ನೆಗೆಟಿವ್ ಪಾತ್ರದಲ್ಲಿ ಅಭಿನಯಿಸಿದ್ದು, ವಿಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ರೋಬೋಟ್​ ಪಾತ್ರದಲ್ಲಿ ನಾಯಕ ರಜನಿಕಾಂತ್ ಮಿಂಚಿದ್ದು, ಎಂದಿನಂತೆ ಈ ಚಿತ್ರದಲ್ಲೂ ತಮ್ಮ ಸ್ಟೈಲ್​​​​ ತೋರಿಸಲಿದ್ದಾರೆ. ಲೈಕಾ ಪ್ರೊಡಕ್ಷನ್ಸ್ನಲ್ಲಿ ಕರಣ್ ಜೋವರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಎ.ಆರ್.ರೆಹಮಾನ್ ಸಂಗೀತವಿದೆ.

Advertisement

Udayavani is now on Telegram. Click here to join our channel and stay updated with the latest news.

Next