ಬೆಂಗಳೂರು: ಪಕ್ಷದ ಬಹಿರಂಗ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತು ನೀಡಿರುವ ಹೇಳಿಕೆ ವಿವಾದಕ್ಕೆ ಮತ್ತು ವಿಪಕ್ಷದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ವಿಡಿಯೋ ವೈರಲ್ ಆಗುತ್ತಿದೆ.
ನಳಿನ್ ಕುಮಾರ್ ಅವರು ಭಾಷಣದ ನಡುವೆ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ 19 ಲಸಿಕೆ ತೆಗೆದುಕೊಳ್ಳಬೇಡಿ, ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದರು. ಆದರೆ ಸಿದ್ದರಾಮಯ್ಯ, ರಾಹುಲ್ ಅವರು ಲಸಿಕೆ ತೆಗೆದುಕೊಂಡರು. ಲಸಿಕೆ ತೆಗೆದುಕೊಂಡ ಕಾರಣಕ್ಕೇ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ ಎಂದು ಎಂಎಲ್‌ಸಿ ಮಂಜುನಾಥ್ ಅವರು ಹೇಳಿದರು ಎಂದು ಹೇಳಿಕೆ ನೀಡಿದ್ದಾರೆ.
ನಳಿನ್ ಕುಮಾರ್ ಅವರ ಹೇಳಿಕೆಗೆ ಸಾಮಾಜಿಕ ತಾಣದಲ್ಲಿ ಮಾತ್ರವಲ್ಲದೆ ಕಾಂಗ್ರೆಸ್ ವಲಯದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
Related Articles
ಸುಧಾಕರ್ ಪ್ರತಿಕ್ರಿಯೆ
ನಮ್ಮ ಪಕ್ಷದ ಅಧ್ಯಕ್ಷರು ಯಾವ ಸಂದರ್ಭದಲ್ಲಿ ಆ ಟೀಕೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ. ಆದರೆ ನಾನು ಈ ಕಾಮೆಂಟ್‌ನಿಂದ ದೂರವಿರಲು ಬಯಸುತ್ತೇನೆ. ಈ ಹೇಳಿಕೆಯನ್ನು ಬೆಂಬಲಿಸಲು ನಾನು ಬಯಸುವುದಿಲ್ಲ ಎಂದು ಹೇಳಿಕೆಗೆ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.