Advertisement

ಕೋವಿಡ್ ಕೇರ್ ಸೆಂಟರ್ ತೆರೆದ ನಾಲ್ಕೇ ದಿನಕ್ಕೆ ವೈದ್ಯರ ವರ್ಗಾವಣೆ : ಸಾರ್ವಜನಿಕರ ಆಕ್ರೋಶ

08:28 PM May 30, 2021 | Team Udayavani |

ಚಿಕ್ಕಮಗಳೂರು : ಜಿಲ್ಲೆಯ ಕಳಸ ಪಟ್ಟಣದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆದು ನಾಲ್ಕು ದಿನ ಕಳೆಯುವಷ್ಟರಲ್ಲಿ ವೈದ್ಯರನ್ನು ಬೇರೆಡೆ ವರ್ಗಾವಣೆ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Advertisement

ಜಿಲ್ಲಾ ಕೇಂದ್ರದಿಂದ 90 ಕಿಲೋಮೀಟರ್ ದೂರದಲ್ಲಿರುವ ಕಳಸ ಪಟ್ಟಣದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಕಳೆದ 4 ದಿನಗಳ ಹಿಂದೆ ಉದ್ಘಾಟನೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ, ಪರಿಷತ್ ಉಪಸಭಾಪತಿ ಪ್ರಾಣೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್, ಸ್ಥಳೀಯ ಶಾಸಕರು ಭಾಗವಹಿಸಿದ್ದರು.

ಕೇಂದ್ರ ಉದ್ಘಾಟನೆಗೊಂಡು ಇನ್ನೂ ಒಂದು ವಾರ ಕಳೆಯುವ ಮುಂಚೆನೆ ಇಲ್ಲಿಯ ವೈದ್ಯ ಡಾ.ಅನುಗೌರಿ ಅವರನ್ನು ಬೀದರ್ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ವೈದ್ಯರಿಲ್ಲದೆ ಕಳಸ ಹಾಗೂ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸುವಂತಾಗಿದೆ.  ಕೋವಿಡ್ ಸಂದರ್ಭದಲ್ಲಿ ಇದ್ಧ ಒಬ್ಬ ವೈದ್ಯರನ್ನು ವರ್ಗಾವಣೆ ಮಾಡಿರುವುದರ ವಿರುದ್ಧ ಜನಸಾಮಾನ್ಯರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next