Advertisement

ವೈದ್ಯರು, ದಾದಿಗಳ ನೇಮಕ ಶುರು: ಶಿವಾನಂದ ಪಾಟೀಲ

06:45 AM Aug 12, 2018 | Team Udayavani |

ವಿಜಯಪುರ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರು ಹಾಗೂ ದಾದಿಯರ ಕೊರತೆ ಇದ್ದು, ನೇಮಕ ಪ್ರಕ್ರಿಯೆ ನಡೆದಿದೆ. ಶೀಘ್ರವೇ ಆರೋಗ್ಯ ಇಲಾಖೆ ಸಿಬ್ಬಂದಿ ಕೊರತೆಯ ಸಮಸ್ಯೆ ನೀಗಿಕೊಳ್ಳಲಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು.

Advertisement

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ತಜ್ಞ ವೈದ್ಯರ 370 ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, 211 ತಜ್ಞ ವೈದ್ಯರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. 600 ವೈದ್ಯರ ಭರ್ತಿ ಪ್ರಕ್ರಿಯೆ ನಡೆದಿದ್ದು, ಕೌನ್ಸೆಲಿಂಗ್‌ ಆರಂಭಗೊಂಡಿದೆ. ಕೌನ್ಸೆಲಿಂಗ್‌ ಪಾರದರ್ಶಕವಾಗಿದ್ದು, ಅಕ್ರಮಕ್ಕೆ ಅವಕಾಶ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಅಕ್ರಮ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಇದಲ್ಲದೇ 1600 ದಾದಿಯರ ನೇಮಕಕ್ಕೂ ಈಗಾಗಲೇ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭಗೊಳ್ಳಲಿದೆ. ನೂತನವಾಗಿ ನೇಮಕಗೊಳ್ಳುವ ವೈದ್ಯರು ಹಾಗೂ ದಾದಿಯರನ್ನು ಗಡಿ ಭಾಗದ ಜಿಲ್ಲೆಗಳು, ವೈದ್ಯರು, ದಾದಿಯರ ಅತಿ ಕೊರತೆ ಇರುವ ಜಿಲ್ಲೆಗಳು, ತಾಯಿ-ಮಗುವಿನ ಸಾವಿನ ಪ್ರಮಾಣ ಹೆಚ್ಚಿರುವ ಜಿಲ್ಲೆಗಳಿಗೆ ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ರಾಜ್ಯದಲ್ಲಿ ಔಷ ಧ ಅಕ್ರಮ ತಡೆಯಲು ಡ್ರಗ್‌ ಪರೀಕ್ಷಕರು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೂ ಸರ್ಕಾರ ಕ್ರಮ ಕೈಗೊಂಡಿದೆ. ಇದರಿಂದ ನಕಲಿ ಹಾಗೂ ಕಳಪೆ ಔಷ ಧ ವಿತರಣೆ ವಿರುದ್ಧ ಕ್ರಮ ಕೈಗೊಳ್ಳಲು ಸಹಾಯವಾಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next