Advertisement

ಮೃತ ಗರ್ಭಿಣಿ ಹೊಟ್ಟೆಯಲ್ಲಿದ್ದಮಗುವನ್ನು ರಕ್ಷಿಸಿದ ವೈದ್ಯರು!

05:59 PM Nov 12, 2021 | Team Udayavani |

ಗದಗ: ಮೃತ ಗರ್ಭಿಣಿ ಹೊಟ್ಟೆಯಿಂದ ಶಸ್ತ್ರಚಿಕಿತ್ಸೆ ಮೂಲಕ ಮಗುವನ್ನು ಜೀವಂತವಾಗಿ ಹೊರತೆಗೆಯುವ ಮೂಲಕ ಮಗುವನ್ನು ರಕ್ಷಿಸಿದ ಅಪರೂಪದ ಘಟನೆ ಇಲ್ಲಿನ ದಂಡಪ್ಪ ಮಾನ್ವಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದಿದೆ.

Advertisement

ಜಿಲ್ಲೆಯ ರೋಣ ತಾಲೂಕಿನ ಮುಶಿಗೇರಿಯ ಅನ್ನಪೂರ್ಣ ಅಬ್ಬಿಗೇರಿ ಎಂಬ ತುಂಬು ಗರ್ಭಿಣಿಗೆ ನ.4ರಂದು ಕಡಿಮೆ ರಕ್ತದೊತ್ತಡ, ಮೂರ್ಛೆ ರೋಗ ಕಾಣಿಸಿಕೊಂಡಿತ್ತು. ಊರಿನಿಂದ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

ಆದರೆ, ಹೊಟ್ಟೆಯಲ್ಲಿದ್ದ ಮಗು ಜೀವಂತವಿರುವುದನ್ನು ಗಮನಿಸಿದ ಡಿಎಂಎಂ ಹೆರಿಗೆ ಆಸ್ಪತ್ರೆಯ ವೈದ್ಯರು ಸ್ಕ್ಯಾನಿಂಗ್‌ ಮಾಡಿದಾಗ ಮಗು ಜೀವಂತವಾಗಿರುವುದು ದೃಢಪಟ್ಟಿತ್ತು. ತಕ್ಷಣ ಕುಟುಂಬಸ್ಥರೊಂದಿಗೆ ಚರ್ಚಿಸಿ ಶಸ್ತ್ರಚಿಕಿತ್ಸೆ ಮೂಲಕ ಮಗುವನ್ನು ಹೊರತೆಗೆದಿದ್ದಾರೆ.

ಹೆಣ್ಣು ಮಗು ಜನನವಾಗಿದ್ದು, ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಮಗುವನ್ನು ಬದುಕಿಸಿದ್ದು, ಮಗುವಿನ ಆರೈಕೆಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next