Advertisement
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್, ಕರ್ನಾಟಕ ಜಾನಪದ ಅಕಾಡೆಮಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಜಾನಪದ ಹಬ್ಬ- ಭಾವೈಕ್ಯತೆಯ ಸಮ್ಮಿಲನ’ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
Related Articles
Advertisement
ಸಮಾರಂಭವನ್ನು ಉದ್ಘಾಟಿಸಿದದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಮಕ್ಕಳಲ್ಲಿ ಜಾನಪದ ಕಲೆ ಕುರಿತು ಆಸಕ್ತಿ ಬೆಳೆಸುವ ಮೂಲಕ ಸಾಂಪ್ರದಾಯಿಕ ಜಾನಪದ ಪರಂಪರೆಯನ್ನು ಸಂರಕ್ಷಿಸಲು ಮುಂದಾಗಬೇಕು. ನಮ್ಮ ಪೂರ್ವಜರು ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವಾಗ, ಭತ್ತ ನಾಟಿ ಮಾಡುವಾಗ ಅಂದು ಆಡು ಭಾಷೆಯಲ್ಲಿ ಕಟ್ಟಿದ ಪದಗಳೆ ಇಂದು ಜಾನಪದ ಗೀತೆಗಳಾಗಿದ್ದು, ಕಲಿತಿರುವ ಜಾನಪದ ಗೀತೆಗಳನ್ನು ಹಾಡುತ್ತಾ, ಮುಂದಿನ ಪೀಳಿಗೆಗೂ ಕಲಿಸುತ್ತಾ ಜಾನಪದ ಕಲೆಯನ್ನು ಉಳಿಸಿಕೊಳ್ಳಬೇಕೆಂದು ಹೇಳಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ. ಹನುಮಂತರಾಯಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್ ,ಉಪಾಧ್ಯಕ್ಷೆ ಪದ್ಮಾವತಿಅಣ್ಣಯಪ್ಪ,ಡಿವೈಎಸ್ಪಿ ಟಿ.ರಂಗಪ್ಪ, ಸರ್ಕಲ್ ಇನ್ಸ್‌ಪೆಕ್ಟರ್ ರಾಘವ ಎಸ್.ಗೌಡ ಇದ್ದರು. ಕಾರ್ಯಕ್ರಮದಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ಜಾನಪದ ಕಲಾ ತಂಡಗಳಿಂದ ವೀರಭದ್ರನ ನೃತ್ಯ, ತಮಟೆ ವಾದನ, ಡೊಳ್ಳು ಕುಣಿತ, ಸೀಮ ಕುಣಿತ, ಪೂಜಾ ಕುಣಿತ, ಕಂಗೀಲು ನೃತ್ಯ ಮೊದಲಾದ ನೃತ್ಯ ಪ್ರದರ್ಶನ ನಡೆಯಿತು.
ಕಾಲೇಜು ವಿದ್ಯಾರ್ಥಿನಿಯರಿಂದ ಜಾನಪದ ನೃತ್ಯ ಪ್ರದರ್ಶನ, ಖ್ಯಾತ ಗಾಯಕರಿಂದ ಜಾನಪದ ಗೀತ ಗಾಯನ, ಪೊಲೀಸ್ ಇಲಾಖೆಯ ಸಿಬ್ಬಂದಿಯಿಂದ ಜಾನಪದ ಹಾಡುಗಳನ್ನು ಹಾಡುವ ಮೂಲಕ ಪ್ರೇಕ್ಷರರ ಮೆಚ್ಚುಗೆ ಪಡೆದರು